ಶಹಾಬಾದ: ಕೊರೊನಾ ವೈರಸ್ ಮಹಾಮಾರಿ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದಾಧ್ಯಾದಂತ ಸೆಮಿ ಲಾಕ್‌ಡೌನ್ ಹೇರಲ್ಪಟ್ಟಿದಲ್ಲದೇ, ತಾಲೂಕಾಡಳಿತದ ಕಠಿಣ ಕ್ರಮದಿಂದಾಗಿ ಶನಿವಾರ ಜನಸಂಚಾರ ವಿರಳವಾಗಿತ್ತು.
ಸರ್ಕಾರದ ಆದೇಶದ ಮೇರೆಗೆ ಕೊರಾನಾ ವೈರಸ್ ಹರಡದಂತೆ ಮುಂಜಾಗ್ರತ ಕೈಗೊಂಡ ಪರಿಣಾಮವಾಗಿ ಜನರು ಮನೆಯಿಂದ ಹೊರಬರಲು ಹಿಂದೆಮುಂದೆ ನೋಡುತ್ತಿದ್ದು, ನಗರಕ್ಕೆ ಜನರು ಬರುವುದು ಹಾಗೂ ಬೇರೆ ಊರಿಗೆ ಹೋಗುವ ಜನರ ಸಂಖ್ಯೆ ಕಡಿಮೆಯಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ, ಜನದಟ್ಟಣೆಯಿಲ್ಲದೇ ಬಿಕೋ ಎನ್ನುತ್ತಿತ್ತು.ಯಾವಾಗಲೂ ರೇಲ್ವೆ ನಿಲ್ದಾಣದ ಸಮೀಪ ನೂರಾರು ಜನರ ಜನದಟ್ಟಣೆ ಕಾಣುತ್ತಿತ್ತು.ಆದರೆ ಕೊರೊನಾ ಎಫೆಕ್ಟ್‌ಗೆ ರೇಲ್ವೆ ನಿಲ್ದಾಣ ಸುತ್ತಮುತ್ತಲಿನಲ್ಲಿ ಯಾವುದೇ ಅಂಗಡಿಗಳು ತೆರೆದಿರಲಿಲ್ಲ.ಅಲ್ಲದೇ ಲಾಡ್ಜ್, ಬಾರ್, ರೆಸ್ಟೋರೆಂಟ ಮುಚ್ಚಿದ್ದರಿಂದ ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದೆ ಎಂದು ವ್ಯಾಪಾರಸ್ಥರು ಅಸಮಾಧಾನ ಹೊರಹಾಕಿದರು.
ಕನ್ನಡದ ಕಂಪನ್ನು ಪಸರಿಸಿದ ಮಹಾನ್ ಚೇತನ ಡಾ.ರಾಜಕುಮಾರ: ಪಾಟೀಲ
ಕೊರೊನಾ ವೈರಸ್ ಸೊಂಕು ಹರಡದಂತೆ ಮದುವೆ, ಸಮಾರಂಭ ಕೂಡ ಮುಂದೂಡಲಾಗಿದೆ. ಯಾವುದೇ ಜನರು ಸೇರುವ ಕಾರ್ಯಕ್ರಮಗಳನ್ನು ನಡೆಸದಂತೆ ಸರ್ಕಾರ ಆದೇಶ ಹೊರಡಿಸಿದ್ದರಿಂದ ಕಲ್ಯಾಣ ಮಂಟಪಗಳು ಜನರಿಲ್ಲದೇ ಬಿಕೋ ಎನ್ನುತ್ತಿದ್ದವು.
ನಗರದ ಮುಖ್ಯ ಬಜಾರನಲ್ಲಿ ಬೆಳಿಗ್ಗೆ ೧೦ ಗಂಟೆಯವರೆಗೆ ಕಿರಾಣಾ, ತರಕಾರಿ, ಬಂಡಿಯ ಮೇಲೆ ಹಣ್ಣು ಮಾರಾಟ ವ್ಯಾಪಾರ ನಡೆಸಿದರು. ನಂತರ ಮೆಡಿಕಲ್ ಹಾಗೂ ಹಾಲು ಬಿಟ್ಟರೇ ಎಲ್ಲಾ ಅಂಗಡಿಗಳು ಮುಚ್ಚಲ್ಪಟ್ಟಿದ್ದವು.
ಬಸ್ ನಿಲ್ದಾಣದಲ್ಲಿ ಯಾವಾಗಲೂ ಜನಜಂಗುಳಿಯಿಂದ ಕೂಡಿರುವ ಸ್ಥಳ ಸಂಪೂರ್ಣ ಜನರಿಲ್ಲದೇ ಸ್ಮಶಾನ ಸ್ಥಿತಿ ಆವರಿಸಿದಂತಾಗಿತ್ತು.ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ತೀರ ವಿರಳವಾಗಿತ್ತು. ಪ್ರತಿ ಬಸ್‌ನಲ್ಲಿ ಕೇವಲ ಒಂದೆರಡು ಜನ ಮಾತ್ರ ಪ್ರಯಾಣಿಕರು ಕಂಡುಬರುತ್ತಿತ್ತು. ನಗರದ ಜನರು ಮನೆಯಲ್ಲಿಯೇ ಉಳಿದು ಗೃಹ ಬಂಧನಕ್ಕೆ ಜಾರಿಕೊಂಡ ಸನ್ನಿವೇಶ ಮಾತ್ರ ಸರ್ವೆ ಸಾಮಾನ್ಯವಾಗಿತ್ತು. ಆದರೆ ಸಂಜೆಯಾದಂತೆ ಒಬ್ಬೊಬ್ಬರು ಹೊರಗಡೆ ಬರುವುದು ಕಂಡು ಬಂದಿತು.
ಅನಾವಶ್ಯಕವಾಗಿ ರಸ್ತೆಗೆ ಬಂದ ಜನರಿಗೆ ತಹಸೀಲ್ದಾರ ನೇತೃತ್ವದಲ್ಲಿ ಲಾಠಿ ಹಿಡಿದು ಎಚ್ಚರಿಕೆ
ಸಾರ್ವಜನಿಕರು ಬೇರೆ ರಾಜ್ಯದಿಂದ ಬಂದ ಹಾಗೂ ಬರುವವರ ಮಾಹಿತಿ ತಪ್ಪದೇ ಮಾಹಿತಿ ನೀಡಿ.ಕೋವಿಡ್ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಮಾಹಿತಿ ಕೇಂದ್ರಕ್ಕೆ ಬೇಟಿ ನೀಡಿ, ಮಾಹಿತಿ ಪಡೆಯಿರಿ. ಆದಷ್ಟು ಸಾರ್ವಜನಿಕರು ಮಾಸ್ಕ್ ಧರಿಸಿ ಕೊರೊನಾ ವೈರಸ್ ಹರಡದಂತೆ ಸಹಕರಿಸಬೇಕು- ಸುರೇಶ ವರ್ಮಾ ತಹಸೀಲ್ದಾರ ಶಹಾಬಾದ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…