ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ ಅಧಿಕಾರಿ ಪರಿಶೀಲನೆ

0
197

ಶಹಾಬಾದ:ನಗರದ ವಿವಿಧ ಭಾಗದ ಕಲ್ಯಾಣ ಮಂಟಪದಲ್ಲಿ ರವಿವಾರ ನಡೆಯುತ್ತಿರುವ ಮದುವೆ ಸಮಾರಂಭಕ್ಕೆ ಕಂದಾಯ ನಿರೀಕ್ಷಕ, ಗ್ರಾಮ ಲೆಕ್ಕಿಗ ಹಾಗೂ ಪೊಲೀಸ್ ಸಿಬ್ಬಂದಿಗಳ ತಂಡ ಬೇಟಿ ನೀಡಿ ಪರಿಶೀಲಿಸಿದರು.

ಸರ್ಕಾರ ನಿಗದಿಪಡಿಸಿದ ಬೆಡ್ ಚಾರ್ಚ್ ಮಾತ್ರ ಪಡೆಯಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ

Contact Your\'s Advertisement; 9902492681

ನಗರದ ವಿವಿಧ ಕಲ್ಯಾಣ ಮಂಟಪದಲ್ಲಿ ಮದುವೆ ಇರುವ ಕಾರಣ ತಹಸೀಲ್ದಾರ ಸುರೇಶ ವರ್ಮಾ ಅವರು ಕಂದಾಯ ನಿರೀಕ್ಷಕರಿಗೆ, ಗ್ರಾಮ ಲೆಕ್ಕಿಗರಿಗೆ ಹಾಗೂ ಪೊಲೀಸರಿಗೆ ಮದುವೆ ನಡೆಯುವ ಮಂಟಪದಲ್ಲಿ ೫೦ಕ್ಕಿಂತ ಹೆಚ್ಚಿನ ಜನರು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿದ್ದಾರೆ ಇಲ್ಲ ಪರಿಶೀಲಿಸಲು ಆದೇಶಿಸಿದ್ದರು.

ಕೋವಿಡ್ ನಿಯಂತ್ರಣಕ್ಕಾಗಿ ವಾರದ ಸಂತೆ ಬಂದ್ ಮಾಡಿಸಿದ ಅಧಿಕಾರಿಗಳು

ಅದರಂತೆ ನಗರದ ಕೆಲವು ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಮದುವೆ ಕಲ್ಯಾಣ ಮಂಟಪಕ್ಕೆ ಬೇಟಿ ನೀಡಿದ ಕಂದಾಯ ನಿರೀಕ್ಷಕ ವೀರಭದ್ರಪ್ಪ, ಗ್ರಾಮಲೆಕ್ಕಿಗ ಶ್ರೀಮಂತ ಹಾಗೂ ಪೊಲೀಸ್ ಪೆದೆಗಳಾದ ಭೀಮಣ್ಣ, ಓಬಳೇಶ ಅವರು ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಿದ್ದಾರೆ ಎಂದು ಪರಿಶೀಲಿಸಿದರು.ಅಲ್ಲದೇ ಮದುವೆಗೆ ಬಂದ್ ಕೆಲವು ಜನರು ಮಾಸ್ಕ್ ಧರಿಸದಿರುವುದನ್ನು ಕಂಡು ಎಚ್ಚರಿಕೆ ನೀಡಿ, ಮಾಸ್ಕ್ ಕೂಡ ನೀಡಿದರು.

ಶಹಾಬಾದ: ವಾರಾಂತ್ಯ ಕರ್ಫ್ಯೂಗೆ ತಾಲೂಕಿನ ಜನತೆ ಸಂಪೂರ್ಣ ಬೆಂಬಲ

ಯಾವುದೇ ಕಾರಣಕ್ಕೂ ಮಾಸ್ಕ್ ಇಲ್ಲದೇ ಮದುವೆಗೆ ಆಗಮಿಸಿದರೇ ಕಠಿನ ಕ್ರಮಕೈಗೊಳ್ಳಲಾಗುತ್ತದೆ.೫೦ಕ್ಕಿಂತ ಹೆಚ್ಚಿನ ಜನರು ಭಾಗವಹಿಸಿದರೇ ಕಲ್ಯಾಣ ಮಂಟಪದವರ ವಿರುದ್ಧ ಕ್ರಮ ಕೈಗೊಳ್ಳುತ್ತೆವೆ ಎಂದರು.ಆದಷ್ಟು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಹೇಳಿದರಲ್ಲದೇ, ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡಬೇಕು.ಒಂದು ವೇಳೆ ತಪ್ಪಿದರೇ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here