ಏಪ್ರಿಲ್ 30ರವರೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

0
34

ಕಲಬುರಗಿ: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ-ಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಮತ್ತು “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳು www.ssp.postmatric.karnataka.gov.in ವೆಬ್‍ಸೈಟ್‍ದಲ್ಲಿ ಏಪ್ರಿಲ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ www.bcwd.karnataka.gov.in/ postmatrichelp@karnataka.gov.in,  ಇಲಾಖಾ ಸಹಾಯವಾಣಿ ಸಂಖ್ಯೆ 8050770005/8050770004 ಹಾಗೂ ದೂರವಾಣಿ ಸಂಖ್ಯೆ 080-35254757 ಗೆ ಸಂಪರ್ಕಿಸಬಹುದಾಗಿದೆ.

Contact Your\'s Advertisement; 9902492681

ಅದರಂತೆ ಎಸ್.ಎಸ್.ಪಿ. ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ಬಹಳಷ್ಟು ವಿದ್ಯಾರ್ಥಿಗಳು ಈವರೆಗೆ ಯಾವುದೇ ತಮ್ಮ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಬಂದು ಇ-ಅಟೆಸ್ಟೇಷನ್ ಮಾಡಿಕೊಂಡಿರುವದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ತಾರಫೇಲ್ 8ನೇ ಕ್ರಾಸ್, ಡಂಕಿನ ಭಾವಿ ಹತ್ತಿರ ಜಿಡಿಎ ಲೇಔಟ್, ಅಂಬಿಕಾ ನಗರ ಹಿಂದುಗಡೆ ಡಿ.ದೇವರಾಜ ಅರಸು ಭವನ ಕಲಬುರಗಿ-ಕಚೇರಿಗೆ ಖುದ್ದಾಗಿ ಬಂದು 2021ರ ಏಪ್ರಿಲ್ 30 ರೊಳಗಾಗಿ ಇ-ಅಟೆಸ್ಟೇಷನ್ ಮಾಡಿಕೊಳ್ಳಬೇಕು. ಇದಕ್ಕೆ ತಪ್ಪಿದಲ್ಲಿ ತಮ್ಮ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.

ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಹಾಗೂ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳ ಹಾಗೂ ವಿದ್ಯಾರ್ಥಿಗಳ ಪಾಲಕರು/ಪೊಷಕರಿಗೆ ಇದನ್ನು ಗಮನಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9148489157ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here