ಸುರಪುರ: ರಾಜ್ಯದಲ್ಲಿ ಈಗ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಜನರು ಮುಂಜಾಗೃತೆ ವಹಿಸಬೇಕು.ಆದ್ದರಿಂದ ಬೆಂಗಳೂರಿನಿಂದ ಬರುತ್ತಿರುವ ಎಲ್ಲಾ ಕಾರ್ಮಿಕರು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಸಲಹೆ ನೀಡಿದರು.
ತಾಲೂಕಿನ ಬಂಡೊಳ್ಳಿ ಚೆಕ್ಪೋಸ್ಟ್ ಬಳಿಯಲ್ಲಿ ಮಂಗಳವಾರ ಬೆಳಿಗ್ಗೆ ಆಗಮಿಸುತ್ತಿದ್ದ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆಯನ್ನು ಪರಿಶೀಲನೆ ನಡೆಸಿ ಮಾತನಾಡಿ,ಕೊರೊನಾ ನಿರ್ಮೂಲನೆಗಾಗಿ ಎಲ್ಲರು ಮುಂಜಾಗೃತೆ ವಹಿಸಬೇಕು.ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ಜನರು ಅನಾವಶ್ಯಕವಾಗಿ ಮನೆಯಿಂದ ಹೊರಗೆ ಬರದಂತೆ ಎಚ್ಚರಿಕೆಯನ್ನು ನೀಡಿದರು.ಅಲ್ಲದೆ ಈಗ ಬೆಂಗಳೂರಿನಿಂದ ಆಗಮಿಸುತ್ತಿರುವ ಎಲ್ಲರು ಒಂದು ವಾರಗಳ ಕಾಲ ಮನೆಯಲ್ಲಿಯೆ ಇರುವಂತೆ ಹಾಗು ಯಾರಿಗಾದರೂ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಥಳಿಯ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಅಥವಾ ಅಂಗನವಾಡಿ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡುವಂತೆ ತಿಳಿಸಿದರು.
ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ಗಳಲ್ಲಿ ಆಗಮಿಸಿದ ಒಟ್ಟು ಜನ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆಯನ್ನು ನಡೆಸಲಾಯಿತು.ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರಾದ ಗುರುಬಸಪ್ಪ ಹಾಗು ವಿಠ್ಠಲ್ ಬಂದಾಳ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…