ಸುರಪುರ: ನಗರದ ತಿಮ್ಮಾಪುರ ನಿವಾಸಿ ಸಮಾಜ ಸೇವಕ ರಾಘವೆಂದ್ರ ಎಲಿಗಾರ್ ತನ್ನ ಸಹೋದರಿ ವಿಜಯಲಕ್ಷ್ಮೀ ನಿಂಗರಾಜ ಕುನ್ನೂರ ಅವರ ವಿವಾಹ ವಾರ್ಷಿಕೋತ್ಸವದ ಅಂಗವಾಗಿ ಕೊರೊನಾ ವಾರಿಯರ್ಸ್ ಮತ್ತು ಸಾರ್ವಜನಿಕರಿಗೆ ಅನ್ನ ನೀರು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ಎಲಿಗಾರ್,ಈಗ ರಾಜ್ಯದಲ್ಲಿ ಲಾಕ್‌ಡೌನ್ ಆರಂಭಗೊಂಡಿದ್ದು ಬಡ ಜನರು ತೀವ್ರ ತೊಂದರೆಯಲ್ಲಿದ್ದಾರೆ ಹಾಗು ಕೊರೊನಾ ವಾರಿಯರ್ಸ್ ನಮಗಾಗಿ ಹಗಲಿರಳು ಸೇವೆ ಮಾಡುತ್ತಿದ್ದಾರೆ.ಆದ್ದರಿಂದ ನನ್ನ ಸಹೋದರಿಯ ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಸರಳವಾಗಿ ಆಚರಿಸುವ ಉದ್ದೇಶದಿಂದ ನಗರದಲ್ಲಿನ ಎಲ್ಲಾ ಕೊರೊನಾ ವಾರಿಯರ್ಸ್ ಮತ್ತು ಅನಾಥರಿಗೆ ನೆರವಾಗುವ ಮೂಲಕ ಆಚರಣೆ ಮಾಡಲಾಗುತ್ತಿದೆ ಎಂದರು.
ನಗರದಲ್ಲಿನ ಪೊಲೀಸ್ ಇಲಾಖೆ ಆರೋಗ್ಯ ಇಲಾಖೆ ಕಂದಾಯ ಇಲಾಖೆ ನಗರಸಭೆ ಹೀಗೆ ಎಲ್ಲಾ ಇಲಾಖೆಯಲ್ಲಿ ಕರ್ತವ್ಯದಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅನ್ನ ನೀರು ವಿತರಣೆ ಮಾಡಲಾಗಿದೆ.ಅಲ್ಲದೆ ನಗರದ ವಿವಿಧೆಡೆಗಳಲ್ಲಿರುವ ಅನಾಥರು ಮಾನಸಿಕ ಅಸ್ವಸ್ಥರು ಮತ್ತು ನಿರ್ಗತಿಕ ವಯೋವೃಧ್ಧರಿಗೆ ಅನ್ನ ನೀರು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ನಿಂಗರಾಜ ಕುನ್ನೂರು ಸೇರಿದಂತೆ ಇತರರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…