ಬಿಸಿ ಬಿಸಿ ಸುದ್ದಿ

ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಕೋವಿಡ್ ಸೋಂಕು ತಡೆಗಟ್ಟುವ ಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಹಾಗೂ ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನ, ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯ ಮಂತ್ರಿಗಳು ಸೂಚಿಸಿದರು.

ಇಂದು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಮಾನ್ಯ ಮುಖ್ಯಮಂತ್ರಿಗಳು, ಸಾರ್ವಜನಿಕರು ಕೋವಿಡ್ ಸೂಕ್ತ ನಡಾವಳಿ ಅಂದರೇ ಮಾಸ್ಕ ದಾರಣೆ, ಸಾಮಾಜಿಕ ಅಂತರ ಕಾಯ್ದುಕೂಳ್ಳುವ ಬಗ್ಗೆ ಖಚಿತಪದಿಸಿಕೋಳ್ಳುವುದು ನಿಯಮಗಳನ್ನು ಉಲ್ಲಘಿಸಿದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲು ತಿಳಿಸಿದರು.

ಖರೀದಿ ಕೇಂದ್ರ ತೆರೆದು ಭತ್ತ, ಶೇಂಗಾ, ಈರುಳ್ಳಿ, ರೇಷ್ಮೆ ಗೂಡಿಗೆ ಖರೀದಿಸಲು ಬೆಂಬಲ ಘೋಷಿಸುವಂತೆ ಮನವಿ

ಕೆಲವು ಜಿಲ್ಲೆಗಳಲ್ಲಿ ಇನ್ನೂ ಕೋವಿಡ್ ಕೇರ್ ಸೆಂಟರುಗಳನ್ನು ತೆರೆದಿಲ್ಲ, ಅಂತಹ ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರುಗಳನ್ನು ಆದ್ಯತೆಯ ಮೇರೆಗೆ ತೆರೆಯುಬೇಕು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗು ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರಗಳನ್ನು ತೆರೆಯಬೇಕು ಇದಕ್ಕಾಗಿ ವಸತಿ ಶಾಲೆಗಳು, ಹಾಸ್ಟೆಲಗಳನ್ನು ಬಳಸಿಕೂಳ್ಳಲು ತಿಳಿಸದರು. ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ತಾಲ್ಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿ ರೋಗಿಗಳಿಗೆ ಹಳ್ಳಿಗಳಲ್ಲಿ ಸರಿಯಾದ ಕಾಳಜಿ ವಹಿಸಲು ನಿರ್ದೇಶನ ನೀಡಿದರು.

ಕೊರೋನ ತಡೆಗಾಗಿ, ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಹಣ ಬಿಡುಗಡೆ ಆಗಿದ್ದು, ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿರುವವರಿಗೆ ಮೆಡಿಕಲ್ ಕಿಟ್ ಗಳನ್ನು ವಿತರಿಸಲು ಕ್ರಮ ವಹಿಸುವಂತೆ ಹಾಗೂ ಇವರ ಆರೋಗ್ಯ ಮೇಲ್ವಿಚಾರಣೆಗಾಗಿ ತಂಡಗಳನ್ನು ರಚಿಸುವಂತೆ ಸೂಚನೆ ನೀಡಿದರು.

ಸಮಾಜ ಸೇವಕ ರಾಘವೇಂದ್ರ ಎಲಿಗಾರ್ ಕೊರೊನಾ ವಾರಿಯರ್ಸ್‌ಗೆ ಅನ್ನ ನೀರು ವಿತರಣೆ

ಕೋವಿಡ್ ಪರೀಕ್ಷೆಗಳನ್ನು ಕೇವಲ ರೋಗಲಕ್ಷಣ ಇದ್ದವರಿಗೆ ಸೀಮಿತ ಮಾಡಿ ಮತ್ತು ಪರೀಕ್ಷಾ ಫಲಿತಾಂಶ 24 ಗಂಟೆಗಳಲ್ಲಿ ಕೊಡುವ ವ್ಯವಸ್ಥೆ ಮಾಡಬೇಕು.  ಬಾಕಿ ಇರುವ ಪರೀಕ್ಷೆಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಎಲ್ಲಾ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಸರಿಯಾದ ಸಮಯದಲ್ಲಿ ತಲುಪುವಂತೆ ಮಾಡಬೇಕು. ಪ್ರತಿ ಆಸ್ಪತ್ರೆಯಲ್ಲಿ ರೆಮಿಡಿಸಿವರ್ ಔಷಧ ಹಾಗೂ ಆಕ್ಸಿಜನ್ ಬಗ್ಗೆ ಆಡಿಟ್ ಆಗಬೇಕು.  ರೆಮಿಡಿಸಿವಿಯರ್ ಯಾರಿಗೆ ಅತೀ ಅವಶ್ಯವಿದೆಯೋ ಅವರಿಗೆ ಕೊಡುವ ವ್ಯವಸ್ಥೆ ಮಾಡಬೇಕು.  ರೆಮ್ ಡಿಸಿವಿರ್ ಮತ್ತು ಆಕ್ಸಿಜನೇಟೆಡ್ ಬೆಡ್ ಗಳ ವಿವೇಚನಾರಹಿತ ಬಳಕೆಯಾಗದಂತೆ ತಡೆಗಟ್ಟಬೇಕು. ಅಗತ್ಯವಿರುವವರಿಗೆ ಮಾತ್ರ  ಈ ಇಂಜೆಕ್ಷನ್ ಹಾಗೂ ಆಕ್ಸಿಜನೇಟೆಡ್ ಬೆಡ್ ಗಳನ್ನು ಒದಗಿಸುವ ಮೂಲಕ ಕೃತಕ ಅಭಾವ ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ವೆಂಟಿಲೇಟರ್ ಬೆಡ್ ಗಳನ್ನು ಸಹ ಅತ್ಯಂತ ವಿವೇಚನೆಯಿಂದ ಬಳಸಬೇಕು. ಯಾವುದಾದರೂ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಾದರೆ, ತುರ್ತು ಸಂದರ್ಭದಲ್ಲಿ ನೆರೆಯ ಜಿಲ್ಲೆಯಿಂದ ಪಡೆದುಕೊಳ್ಳುವಂತೆ, ಜಿಲ್ಲಾಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಹಾಗೂ ಇತರೆ ಸಂಪನ್ಮೂಲಗಳನ್ನು ಕೋವಿಡ್ ನಿರ್ವಹಣೆಗಾಗಿ ಬಳಸಿಕೊಳ್ಳುವಂತೆ ತಿಳಿಸಿದರು.

ಕೊರೋನಗಿಂತಲೂ ಮಾರಕವಾದ ಎಚ್1ಎನ್1 ವೈರಸನ್ನು ಗೆದ್ದ ವಿಶ್ವ ಗುರು ಭಾರತದ ಬಗ್ಗೆ ನಿಮಗೆ ಗೊತ್ತಾ?

ಮೈಸೂರಿನಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್ ನಲ್ಲಿ ಇರುವ ಒಟ್ಟು 5 ಆಕ್ಸಿಜನ್ ಜನರೇಟಿಂಗ್ ಘಟಕಗಳ ಪೈಕಿ ಎರಡು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಮೂರು ಘಟಕಗಳ ದುರಸ್ತಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗೆ ತಿಳಿಸಿದರು.  ಕೃಷಿ ಚಟುವಟಿಕೆಗಳು, ಸರ್ಕಾರ ಅನುಮತಿಸಿರುವ ಕೈಗಾರಿಕೆ ಮತ್ತಿತರ ಚಟುವಟಿಕೆಗಳು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಅಬಾಧಿತವಾಗಿ ನಡೆಯುವಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು. ಸಚಿವರ ಒಂದು ವರ್ಷದ ವೇತನ ಹಾಗೂ ಶಾಸಕರ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿಗಳು  ಸಲಹೆ ನೀಡಿದರು.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

3 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

14 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 day ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 day ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago