ಬಿಸಿ ಬಿಸಿ ಸುದ್ದಿ

೨೦೨೦-೨೧ ನೇ ಸಾಲಿನ ರಾಜ್ಯ ಅಗ್ನಿಶಾಮಕ ತುರ್ತು ಸೇವೆಗಳ ನೇರ ನೇಮಕಾತಿ ಪ್ರಕ್ರಿಯೆ

ಕಲಬುರಗಿ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಸರ್ಕಾರದ ಆದೇಶ  ಸಂಖ್ಯೆ ಒಇ ೨೨೫ ಕಅಸೇ ೨೦೧೩, ದಿನಾಂಕ:-೦೫-೦೫-೨೦೧೪ ರಂತೆ ಖಾಲಿಯಿರುವ ನೇರ ನೇಮಕಾತಿ ಹುದ್ದೆಗಳನ್ನು ೨೦೧೪-೧೫ ಮತ್ತು ೨೦೧೫-೧೬ ರಲ್ಲಿ ೧,೯೮೯ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಾಗಿತ್ತು ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಸರ್ಕಾರದ ಆದೇಶ ಸಂಖ್ಯೆ: ಒಇ ೧೦ ಕಅಸೇ ೨೦೧೯, ದಿನಾಂಕ:-೦೪-೧೦-೨೦೧೯ ರ ಆದೇಶದಂತೆ ೨೦೧೬-೧೭ನೇ ಸಾಲಿನಲ್ಲಿ ಅಗ್ನಿಶಾಮಕ-೬೬೦, ಅಗ್ನಿಶಾಮಕ ಚಾಲಕ-೧೭೬ ಮತ್ತು ಚಾಲಕ ತಂತ್ರಜ್ಞ-೪೭ ಒಟ್ಟು ೮೮೩ ಹುದ್ದೆಗಳು ೨೦೧೪-೧೫ ಮತ್ತು ೨೦೧೫-೧೬ ನೇ ಸಾಲಿನ ನೇಮಕಾತಿಯಲ್ಲಿ ವಿವಿಧ ಕಾರಣಗಳಿಂದ ಬಾಕಿ ಉಳಿದ ೩೮೭ ಹುದ್ದೆಗಳು ಮತ್ತು ಹೈದ್ರಾಬಾದ್-ಕರ್ನಾಟಕ ಪ್ರದೇಶದಲ್ಲಿ ಪ್ರಸ್ತುತ ಖಾಲಿಯಿರುವ ಅಗ್ನಿಶಾಮಕ ಠಾಣಾಧಿಕಾರಿ-೧೦, ಅಗ್ನಿಶಾಮಕ-೨೩೯, ಅಗ್ನಿಶಾಮಕ ಚಾಲಕ-೨೮ ಮತ್ತು ಚಾಲಕ ತಂತ್ರಜ್ಞ-೨೦ ಒಟ್ಟು ೨೯೭ ಹುದ್ದೆಗಳು ಸೇರಿ ಒಟ್ಟು ೧,೫೬೭ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮಂಜೂರಾತಿ ನೀಡಲಾಗಿರುತ್ತದೆ.

ಕರ್ನಾಟಕ ಅಗ್ನಿಶಾಮಕ ಸೇವೆಗಳ (ವೃಂದ ಮತ್ತು ನೇಮಕಾತಿ) ನಿಯಮಗಳು ೨೦೧೩ ರನ್ವಯ ನೇರ ನೇಮಕಾತಿ ಮೂಲಕ ಮೇಲ್ಕಾಣಿಸಿದಂತೆ ಅಗ್ನಿಶಾಮಕ ಠಾಣಾಧಿಕಾರಿ, ಅಗ್ನಿಶಾಮಕ, ಅಗ್ನಿಶಾಮಕ ಚಾಲಕ ಹಾಗೂ ಚಾಲಕ ತಂತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಆದೇಶ ಸಂಖ್ಯೆ: ಒಇ ೧೨೯ ಕಅಸೇ ೨೦೨೦, ದಿನಾಂಕ:-೧೭-೦೭-೨೦೨೦ರ ಆದೇಶದಲ್ಲಿ ಸರ್ಕಾರವು ಮಂಜೂರಾತಿ ನೀಡಿದ ಒಟ್ಟು ೧,೫೬೭ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅಧಿಸೂಚನೆಯನ್ನು ಆನ್‌ಲೈನ್‌ನಲ್ಲಿ ಹಾಗೂ ಪತ್ರಿಕ ಪ್ರಕಟಣೆ ಹೊರಡಿಸಿಲಾಗಿರುತ್ತದೆ. ಸದರಿ ಹುದ್ದೆಗಳ ನೇಮಕಾತಿಗಾಗಿ ಸ್ವೀಕೃತಗೊಂಡಿರುವ ಎಲ್ಲಾ ಅರ್ಜಿಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅರ್ಹ ಆಯ್ಕೆ ಪಟ್ಟಿ ನೀಡಲು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ನೇಮಕಾತಿ ವಿಭಾಗ, ಬೆಂಗಳೂರು ಇವರಿಗೆ ವಹಿಸಿಕೊಡಲಾಗಿತ್ತು.

ವಿವಿಧ ದರ್ಜೆಯ ೧,೫೬೭ ಖಾಲಿ ಹುದ್ದೆಗಳಿಗೆ, ಒಟ್ಟು ೧,೬೫,೩೫೪ ಅರ್ಜಿಗಳು ಸ್ವೀಕೃತವಾಗಿರುತ್ತದೆ, ಅವುಗಳಲ್ಲಿ ೧:೫ ಅನುಪಾತದಂತೆ ಒಟ್ಟು ೧೨,೦೧೯ ಅಭ್ಯರ್ಥಿಗಳಿಗೆ ಕರೆ ಪತ್ರ ಕಳುಹಿಸಲಾಗಿದ್ದು, ಇವುಗಳಲ್ಲಿ   ೭,೦೮೭ ಸಂಖ್ಯೆಯ ಅಭ್ಯರ್ಥಿಗಳು ದೈಹಿಕ ಮತ್ತು ದೇಹದಾರ್ಢ್ಯತೆ ಪರೀಕ್ಷೆಗೆ ಹಾಜರಾಗಿರುತ್ತಾರೆ.

ಆರ್.ಎ.ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ, ಬನ್ನೇರುಘಟ್ಟ ರಸ್ತೆ, ಬೆಂಗಳೂರು ಇಲ್ಲಿ ಈ ನೇರ ನೇಮಕಾತಿ ಪ್ರಕ್ರಿಯೆಯ ದೈಹಿಕ ಮತ್ತು ದೇಹದಾರ್ಢ್ಯತೆ ಪರೀಕ್ಷೆ ನಡೆಸಲಾಗಿರುತ್ತದೆ, ಪರೀಕ್ಷೆ ನಡೆಸುವ ಸ್ಥಳಗಳಲ್ಲಿ ಪಾರದರ್ಶಕತೆ ಕಾಪಾಡುವ ದೃಷ್ಟಿಯಿಂದ ೧೦ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಿ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಬಯೋಮೆಟ್ರಿಕ್ ಮಿಷಿನ್ ಉಪಯೋಗಿಸಿ ಪ್ರತಿಯೊಬ್ಬರ ಭಾವಚಿತ್ರದ ಜೊತೆಗೆ ಹೆಬ್ಬೆರಳಿನ ಗುರುತನ್ನು ದಾಖಲು ಮಾಡಿ, ಅಭ್ಯರ್ಥಿಗಳ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರತಿಯೊಬ್ಬರಿಗೂ ಚೆಸ್ಟ್ ನಂಬರ್ ನೀಡಿ ಎಲ್ಲಾ ಹಂತಗಳಲ್ಲಿಯೂ ವಿಡಿಯೋ ರೇಕಾರ್ಡ್ ಮಾಡಲಾಗಿರುತ್ತದೆ.

ಅಭ್ಯರ್ಥಿಗಳ ದೈಹಿಕ ಪರೀಕ್ಷೆ ಅಂದರೆ ತೂಕ ಮತ್ತು ಎತ್ತರಗಳನ್ನು ಪರೀಕ್ಷಿಸಲು ಬಿ.ಎಮ್.ಐ ಮಿಷಿನ್ ಬಳಸಲಾಗಿದೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ತೆಗೆದುಕೊಂಡ ಸಮಯವನ್ನು ದಾಖಲಿಸಲು ಯುವಜನಾ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಅಮೆಚೂರ್ ಅಥ್ಲೆಟಿಕ್ ಅಸೋಶಿಯೇಷನ್ ವತಿಯಿಂದ ೦೯ ಜನ ತೀರ್ಪುಗಾರರ ಸೇವೆಯನ್ನು ಪಡೆಯಲಾಗಿತ್ತು.

ಪ್ರತಿಯೊಂದು ಹಂತದ ಪರೀಕ್ಷೆಯ ನಂತರ ಫಲಿತಾಂಶವನ್ನು ಆ ಕೂಡಲೇ ಅಭ್ಯರ್ಥಿಗಳಿಗೆ ತೋರಿಸಿ ಸಹಿ ಪಡೆದು ಅದರ ಒಂದು ಫಲಿತಾಂಶದ ಹಾಳೆಯ ಪ್ರತಿಯನ್ನು ಪ್ರತಿಯೊಬ್ಬ ಅಭ್ಯರ್ಥಿಗೆ ನೀಡಲಾಗಿರುತ್ತದೆ.

ಈ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಕೋವಿಡ್-೧೯ ಗೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆಯನ್ವಯ ಎಲ್ಲಾ ಮುಂಜಾಗೃತೆ ಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ.

ವಿವಿಧ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಯನ್ನು ದಿನಾಂಕ:-೧೫-೦೨-೨೦೨೧ ರಂದು ಪ್ರಾರಂಭಿಸಿ ದಿನಾಂಕ:-೨೭-೦೪-೨೦೨೧ ರ ವರೆಗೆ ಯಾವುದೇ ದೂರುಗಳು ಇಲ್ಲದೇ ಅತ್ಯಂತ ಪಾರದರ್ಶಕತೆಯಿಂದ ನಡೆಸಿ ಈ ನೇರ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಅಂತ್ಯಗೊಳಿಸಲಾಗಿದೆ.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

5 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

5 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

6 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

16 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

17 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

17 hours ago