ಬಿಸಿ ಬಿಸಿ ಸುದ್ದಿ

ಕಲಬುರಗಿಯಲ್ಲಿ 63,456 ಎಎವೈ ಪಡಿತರದಾರರಿಗೆ ಆಹಾರ ಧಾನ್ಯ

ಕಲಬುರಗಿ: ಕೋವಿಡ್-19ರ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎನ್.ಎಫ್.ಎಸ್.ಎ. ಹಾಗೂ ಪಿ.ಎಂ.ಜಿ.ಕೆ.ಎ.ವೈ. ಹಂಚಿಕೆಯಡಿ 2021ರ ಮೇ ಮಾಹೆಯಲ್ಲಿ ಕಲಬುರಗಿ ಜಿಲ್ಲೆಯ ಎಎವೈ/ ಅಂತ್ಯೋದಯ ಅನ್ನ, ಬಿ.ಪಿ.ಎಲ್./ ಆದ್ಯತಾ ಹಾಗೂ ಎ.ಪಿ.ಎಲ್. (ಆದ್ಯತೇತರ) ಪಡಿತರ ಚೀಟಿ ಕಾರ್ಡುದಾರರಿಗೆ ಈ ಕೆಳಗಿನಂತೆ ಪಡಿತರ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳಾದ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಕೋವಿಡ್-19 ಸುರಕ್ಷತಾ ನಿಯಮಗಳನ್ನು ಪಾಲಿಸಿ, ಜನದಟ್ಟಣೆ ಉಂಟಾಗದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಪಡಿತರ ಆಹಾರ ಧಾನ್ಯವನ್ನು ಪಡೆಯಬೇಕೆಂದು ಡಿ.ಸಿ. ಅವರು ಮನವಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ 63,456 ಎಎವೈ ಪಡಿತರ ಚೀಟಿಗಳ 2,64,685 ಸದಸ್ಯರಿಗೆ ಮತ್ತು 4,91,275 ಪಿ.ಎಚ್.ಎಚ್. (ಬಿ.ಪಿ.ಎಲ್.) ಪಡಿತರ ಚೀಟಿಗಳ 16,69,514 ಸದಸ್ಯರಿಗೆ ಹಾಗೂ 18,209 ಎ.ಪಿ.ಎಲ್. (ವಿಲ್ಲಿಂಗ್‍ನೆಸ್) ಪಡಿತರ ಕಾರ್ಡುದಾರರಿಗೆ ಈ ಕೆಳಗಿನಂತೆ ಪಡಿತರ ಚೀಟಿಯನ್ನು ವಿತರಿಸಲಾಗುತ್ತದೆ.

ಎಎವೈ/ ಅಂತ್ಯೋದಯ ಅನ್ನ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ. ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ. ಅಕ್ಕಿ ಮತ್ತು ಪಿ.ಎಂ.ಜಿ.ಕೆ.ಎ.ವೈ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ.

ಬಿಪಿಎಲ್/ ಆದ್ಯತಾ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ 5 ಕೆ.ಜಿ ಅಕ್ಕಿ (ಪ್ರತಿ ಸದಸ್ಯರಿಗೆ ಒಟ್ಟು 10 ಕೆ.ಜಿ ಅಕ್ಕಿ) ಹಾಗೂ ಪ್ರತಿ ಪಡಿತರ ಚೀಟಿಗೆ 2 ಕೆ.ಜಿ. ಗೋಧಿ ಉಚಿತವಾಗಿ ವಿತರಿಸಲಾಗುತ್ತದೆ.

ಎಪಿಎಲ್ /ಆದ್ಯತೇತರ (Willingness) ಏಕಸದಸ್ಯ ಇರುವ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ ಮತ್ತು ಒಂದಕ್ಕಿಂತ ಹೆಚ್ಚು ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ಪ್ರತಿ ಕೆ.ಜಿ.ಗೆ ದರ 15 ರೂ. ರಂತೆ ವಿತರಿಸಲಾಗುತ್ತದೆ.

ಅಂತರರಾಜ್ಯ/ ಅಂತರ್‍ಜಿಲ್ಲೆ ಪೋರ್ಟೆಬಿಲಿಟಿ (Portability) ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

25 mins ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

3 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

9 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

9 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

10 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

21 hours ago