ಬಿಸಿ ಬಿಸಿ ಸುದ್ದಿ

ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬೆಡ್ ಸಿಗದಿದ್ದರೆ ಏನು ಮಾಡಬೇಕು.?

ಕಲಬುರಗಿ: ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಕೊರೊನಾ ಮತ್ತು ಕೊರೊನಾ ಇಲ್ಲದ ರೋಗಿಗಳಿಗೆ ಬೆಡ್ ಇಲ್ಲವೆಂದು ಚಿಕಿತ್ಸೆ ಸಿಗದೆ ಹಲವರು ಮೃತಪಡುತ್ತಿರುವ ಘಟನೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ.

ಆದರೆ ಇಂತಹ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಬೆಡ್ ಇಲ್ಲ ಎಂದು ದಾಖಲಿಸಿಕೊಳ್ಳಲು ನಿರಾಕರಿಸಿದಾಗ ಅವರಿಂದ ಒಂದು ರೆಫರೆ ಲೇಟರ್ ಪಡೆಯಬೇಕು ಅವರು ರೆಫರ್ ಲೇಟರ್ ನೀಡಲು ನಿರಾಕರಿಸಿದರೆ ಜಿಲ್ಲಾಧಿಕಾರಿ ಮತ್ತು  ಜಿಲ್ಲಾ ಆರೋಗ್ಯ ಅಧಿಕಾರಿ ವಿರುದ್ಧ ದೂರು ನೀಡಬಹುದಾಗಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರರಾದ ರಿಯಾಜ್ ಖತೀಬ್ ಮಾಹಿತಿ ನೀಡಿದ್ದಾರೆ.

(ದೂರಿನ ಪ್ರತಿ ಈ ಕೆಳೆಗೆ ಹಾಕಲಾಗಿದೆ)Complaint letter For Refusal Of Admission

ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿದರು ಸಹ ಖಾಲಿ ಇಲ್ಲ ಎಂದು ಹೇಳಲಾಗುತ್ತಿದೆ. ಸರಕಾರದ ಆದೇಶದಂತೆ 50% ಬೆಡ್ ಮಿಸಲಿಡಲು ಆದೇಶ ನೀಡಲಾಗಿದ್ದು, ಸರಕಾರಿ ದರದಂತೆ ಚಾರ್ಜ್ ಮಾಡಲು ಆದೇಶವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಆರ್ಥಿಕವಾಗಿ ಇರುವವರನ್ನು ಖಾಸಗಿ ಕೋಟಾದಲ್ಲಿ ಬೆಡ್ ನೀಡಿ ಮೂವತು ಸಾವಿರಕ್ಕೂ ಅಧಿಕವಾಗಿ ಚಾರ್ಜ್ ಮಾಡಲು ಬೆಡ್ ಖಾಲಿ ಇಲ್ಲ ಎಂದು ಹೇಳಿ ಕಳುಹಿಸಲಾಗುತ್ತಿದೆ ಇಂತಹ ದಂಧೆ ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಂಡುಬರುತ್ತಿದೆ.

ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ತನಿಖೆ ನಡೆಸಿ ಕಠಿಣ ಕೈಗೊಳ್ಳದಿದ್ದರೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಬಹುದೆಂದು ಸಮಾಜಿಕ ಹೋರಾಟಗಾರರಾದ ಸಿರಾಜ್ ಶಹಾಬಾದಿ ಆತಂಕ ವ್ಯಕ್ತಪಡಿಸಿ ಆಗ್ರಹಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago