ಬೆಂಗಳೂರು: ಬಿಡಿಎ ನೂತನ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಬಿ.ರಾಜೇಶ್ ಗೌಡ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ನೂತನ ಆಯುಕ್ತರಿಗೆ ಶುಭ ಕೋರಿ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಪ್ರಾಧಿಕಾರ ಸಾರ್ವಜನಿಕರ ಸೇವೆಯ ಸಂಸ್ಥೆಯಾಗಿದ್ದು ಸಾರ್ವಜನಿಕ ಸ್ನೇಹಿ ಸಂಸ್ಥೆಯನ್ನಾಗಿ ಮಾಡುವ ಹೊಣೆ ಎಲ್ಲರದ್ದಾಗಿದೆ ಎಂದರು.
ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗಾಗಿ ಬಿಡಿಎಗೆ ಅಲೆಯದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಬಿಡಿಎ ಒಂದು ಕುಟುಂಬ ಇದ್ದಂತೆ. ಎಲ್ಲರೂ ಒಗ್ಗಟ್ಟಾಗಿ ಸಂಸ್ಥೆ ಮತ್ತು ಸಾರ್ವಜನಿಕರ ಏಳ್ಗೆಗಾಗಿ ಶ್ರಮಿಸಿ, ಸಂಸ್ಥೆಗೆ ಹೆಸರು ತರೋಣ ಎಂದರು.
ರಾಜೇಶ್ ಗೌಡ ಅವರು ಮಾತನಾಡಿ, ಸಾರ್ವಜನಿಕರಿಗಾಗಿ ಇರುವ ಸಂಸ್ಥೆಯ ಉನ್ನತಿಗೆ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಡಿಎಯ ಹಲವಾರು ಅಧಿಕಾರಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…