ಸುರಪುರ: ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿನ ಕೋವಿಡ್ ಕೇರ್ ಸೆಂಟರ್‌ಗೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕೋವಿಡ್ ಕೇರ್ ಸೆಂಟರ್‌ಗೆ ಬರುವ ಸೊಂಕಿತರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ವ್ಯವಸ್ಥೆಯನ್ನು ಕಲ್ಪಿಸಿ,ಬಂದವರಿಗೆ ಆಹಾರ ನೀರು ಔಷಧಿ ಯಾವುದರ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಲು ತಿಳಿಸಿದರು.
ಕೋವಿಡ್ ರೋಗಿಗೆ ಚಿಕಿತ್ಸೆ ನೀಡಲು ಹಿಂದೇಟು: ಖಾಸಗಿ ಆಸ್ಪತ್ರೆ ವಿರುದ್ಧ ದೂರು ದಾಖಲು
ಇದೇ ಸಂದರ್ಭದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ವಿವರಣೆ ನೀಡಿ,ಈ ವಸತಿ ನಿಲಯದಲ್ಲಿ ೧೨೦ ಹಾಸಿಗೆಗಳನ್ನು ಹಾಗು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ೫೦ ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ.ಅಲ್ಲದೆ ಕಲ್ಯಾಣ ಮಂಟಪದಲ್ಲಿಯೂ ಅವಶ್ಯಕತೆ ಬಿದ್ದಲ್ಲಿ ಆರಂಭಿಸಲು ಯೋಚಿಸಲಾಗಿದೆ ಎಂದು ತಿಳಿಸಿದರು.ಅಲ್ಲದೆ ಈಗಾಗಲೆ ೫೫ ಲಕ್ಷ ರೂಪಾಯಿಗಳ ಅನುದಾನವಿದ್ದು ಇನ್ನೂ ಬೇಕಾದಲ್ಲಿ ಜಿಲ್ಲಾಧಿಕಾರಿಗಳು ತಿಳಿಸುವಂತೆ ಹೇಳಿದ್ದು ಅನುದಾನ ಯಾವುದೇ ಕೊರತೆ ಇಲ್ಲದ ಬಗ್ಗೆ ಶಾಸಕರಿಗೆ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ವೆಂಕಟೇಶ ಹುಗಿಬಂಡಿ ತಾಲೂಕು ಪಂಚಾಯತಿ ಇಒ ಅಂಬ್ರೇಶ ವೈದ್ಯಾಧಿಕಾರಿ ಹರ್ಷವರ್ಧನ ರಫಗಾರ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…