ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ಮಾಡಿದಲ್ಲಿ ಜೈಲಿಗೆ: ಡಾ. ಕೆ. ಸುಧಾಕರ

0
21

ಕಲಬುರಗಿ: ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ನೀಡಲಾಗುವ ರೆಮಿಡಿಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಅಂಥವರ ವಿರುದ್ಧ ಎಫ್.ಐ.ಆರ್. ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಅವರು ಕಳ್ಳ ಮಾರಾಟಗಾರರಿಗೆ ಎಚ್ಚರಿಸಿದ್ದಾರೆ.

ಶನಿವಾರ ಇಲ್ಲಿನ ಜಿಲ್ಲಾ ಪಂಚಾಯಿತಿಯ ನೂತನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಕೊರೋನಾ ಪೀಡಿತರಿಗೆ ಚಿಕಿತ್ಸೆಗೆ ಇತ್ತೀಚೆಗೆ ರೆಮಿಡಿಸಿವಿರ್ ಬಳಕೆಗೆ ಭಾರಿ ಬೇಡಿಕೆ ಬಂದಿದೆ. ಇದನ್ನೇ ಕೆಲವರು ದುರ್ಬಳಕೆ ಮಾಡಿಕೊಂಡು ಅನಧಿಕೃತ ಮತ್ತು ಅನೈತಿಕವಾಗಿ ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಇಂತಹ ಪ್ರಕರಣದಲ್ಲಿ ಯಾರಾದರು ಸಿಲುಕಿಕೊಂಡರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇದರ ಮಾಫಿಯಾದ ಇಡೀ ಜಾಲವನ್ನು ಜಾಲಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಆಕ್ಸಿಜನ್, ರೆಮಿಡಿಸಿವಿರ್, ಹಾಸಿಗೆಗಳ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿಗಳ ನೇಮಕಕ್ಕೆ ಸೂಚನೆ

ಇನ್ನು ಖಾಸಗಿ ಆಸ್ಪತ್ರೆಗಳು ಸಹ ಕೋವಿಡ್ ರೋಗಿಗೆ ಅಗತ್ಯವಿದ್ದಲ್ಲಿ ಮಾತ್ರ ರೆಮಿಡಿಸಿವಿರ್ ಇಂಜೆಕ್ಷನ್ ಕೋರಿ ಬೇಡಿಕೆ ಸಲ್ಲಿಸಬೇಕು. ಅದರಂತೆ ಬಳಕೆ ಮಾಡಿ ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕು, ಉಳಿದಿದ್ದಲ್ಲಿ ಹಿಂದಿರುಗಿಸಬೇಕು. ಒಂದು ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವಯಾಲ್ ತೆಗೆದುಕೊಂಡು ಆಸ್ಪತ್ರೆಯ ಯಾವುದೇ ಸಿಬ್ಬಂದಿ ದುರ್ಬಳಕೆ ಮಾಡಿಕೊಂಡಲ್ಲಿ ಅಂತಹ ಆಸ್ಪತ್ರೆಗಳ ಲೈಸೆನ್ಸ್ ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ ಸಚಿವರು ಕಳೆದ ವ? ರಾಜ್ಯದಲ್ಲಿ ೧೧ ಲಕ್ಷ ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಆದರೆ ಯಾರೊಬ್ಬರಿಗೂ ರೆಮಿಡಿಸಿವಿರ್ ಇಂಜೆಕ್ಷನ್ ನೀಡಿಲ್ಲ ಎಂಬುದನ್ನು ಆಸ್ಪತ್ರೆಗಳು ಮತ್ತು ರೋಗಿಗಳು ಅರಿಯಬೇಕು ಎಂದರು.

ಮಹಾರಾ?ದ ಗಡಿಗೆ ಹೊಂದಿಕೊಂಡಿದ್ದರಿಂದ ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಕಾಣಿಸಿಕೊಂಡಿದೆ. ಕಲಬುರಗಿ ನಗರದಲ್ಲಿಯೆ ೪ ವೈದ್ಯಕೀಯ ಕಾಲೇಜುಗಳಿದ್ದು, ಇದು ಸಮಾಧಾನದ ಸಂಗತಿಯಾಗಿದೆ.  ಕಾಲೇಜುಗಳ ಒಟ್ಟು ಹಾಸಿಗೆಯಲ್ಲಿ ಶೇ.೭೫ರ? ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕು. ಈ ನಿಟ್ಟಿನಲ್ಲಿ ತಮ್ಮ ವಶಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಜಿಲ್ಲೆಯ ಸಂಸದರು, ಶಾಸಕರು ಒಳಗೊಂಡಂತೆ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಇಂದು ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಸಮಗ್ರವಾಗಿ ಸಭೆ ನಡೆಸಿ ಪರಿಶೀಲಿಸಿದ್ದೇನೆ. ಕೆಲವು ನ್ಯೂನತೆಗಳಿದ್ದು, ಇದನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಅಸಂಘಟಿತ ವಲಯದ ಕ್ಷೌರಿಕರಿಗೆ ಲೇಬರ್ಸ (ಸ್ಮಾರ್ಟ) ಕಾರ್ಡ್ ವಿತರಣೆ

ರಾಜ್ಯದಲ್ಲಿ ಕೋವಿಡ್ ಸೋಂಕಿನ ಸರಪಳಿಯನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಮೇ ೧೨ರ ವರೆಗೆ ಕೋವಿಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದನ್ನು ಕಲಬುರಗಿ ಜಿಲ್ಲೆಯಲ್ಲಿಯೂ ಕಟ್ಟುನಿಟ್ಟಾಗಿ ಜಾರಗೊಳಿಸುವಂತೆ ಪೊಲೀಸ್ ಆಯುಕ್ತರು ಮತ್ತು ಎಸ್.ಪಿ. ಅವರಿಗೆ ಸೂಚಿಸಿದ್ದೇನೆ ಎಂದರು.

ರೋಗದ ಲಕ್ಷಣವಿಲ್ಲದ ಕೋವಿಡ್ ಸೋಂಕಿತರು ಸಹ ಆಕ್ಸಿಜನ್, ರೆಮಿಡಿಸಿವಿರ್ ಇಂಜೆಕ್ಷನ್ ಬೇಡಿಕೆಗೆ ಆಗ್ರಹಿಸುತ್ತಿರುವುದು ಇವುಗಳ ತೀವ್ರ ಅಭಾವಕ್ಕೆ ಕಾರಣವಾಗಿದೆ. ಹೋಮ್ ಐಸೋಲೇಶನ್‌ನಲ್ಲಿದ್ದವರಿಗೆ ಮೆಡಿಕಲ್ ಕಿಟ್ ನೀಡಲು ಸೂಚಿಸಿದ್ದೇನೆ. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಹೋಮ್ ಐಸೋಲೇಶನ್‌ನಲ್ಲಿರುವ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬುವ ವೈದ್ಯಕೀಯ ಸಮಾಲೋಚನೆ ಅತ್ಯಗತ್ಯವಾಗಿದೆ. ಇದಕ್ಕಾಗಿ ವೈದ್ಯಕೀಯ ತಂಡಗಳು ಮನೆ-ಮನೆಗೆ ಭೇಟಿ ನೀಡಿ ಸೋಂಕಿತರಿಗೆ ಅಗತ್ಯ ಅರಿವು ಮತ್ತು ಮಾರ್ಗಸೂಚಿಗಳ ಬಗ್ಗೆ ತಿಳಿಸಬೇಕು ಎಂದರು.

ರಾಜ್ಯದ ಜನತೆ ರಾಜ್ಯ ಸರ್ಕಾರದೊಂದಿಗೆ ಸಹಕಾರ ನೀಡಿದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಕೋವಿಡ್ ಸೋಂಕಿನ ಮೊದಲನೇ ಅಲೆಯಂತೆ ಎರಡನೇ ಅಲೇಯನ್ನು ನಾವು ಗೆಲ್ಲುತ್ತೇವೆ ಎಂದು ಆತ್ಮವಿಶ್ವಾಸದಿಂದ ಡಾ.ಕೆ.ಸುಧಾಕರ ಅವರು ನುಡಿದರು.

ಕೋವಿಡ್ ರೋಗಿಗೆ ಚಿಕಿತ್ಸೆ ನೀಡಲು ಹಿಂದೇಟು: ಖಾಸಗಿ ಆಸ್ಪತ್ರೆ ವಿರುದ್ಧ ದೂರು ದಾಖಲು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ಶಾಸಕರುಗಳಾದ ಡಾ. ಅವಿನಾಶ್ ಜಾಧವ, ಸುಭಾಷ ಗುತ್ತೇದಾರ, ಖನೀಜ್ ಫಾತಿಮಾ, ವಿಧಾನ ಪರಿ?ತ್ ಶಾಸಕರುಗಳಾದ ಬಿ.ಜಿ.ಪಾಟೀಲ್, ಶಶೀಲ್ ಜಿ. ನಮೋಶಿ, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here