ಯಾದಗಿರಿ: ಜಿಲ್ಲೆಯ ಜಿಲ್ಲಾ ವರದಿಗಾರರಾದ ಲಕ್ಷ್ಮೀಕಾಂತ ಕುಲಕರ್ಣಿ ಅವರನ್ನು ರಾಜ್ಯ ಮಟ್ಟದ ಹೂಗಾರ್ ಸ್ಮಾರಕ ಮಾಧ್ಯಮ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಪತ್ರಕರ್ತರ ವೇದಿಕೆಯ ರಾಜ್ಯಾಧ್ಯಕ್ಷರಾದ ಮಹೇಶ್ ಬಾಬು ಸುರ್ವೇ ತಿಳಿಸಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜುಲೈ 1 ರಂದು ಸಾಯಂಕಾಲ 6 ಗಂಟೆಗೆ ಪತ್ರಕರ್ತರ ವೇದಿಕೆ ಹಾಗೂ ಬೆಂಗಳೂರು ಕರ್ನಾಟಕ ನ್ಯೂಸ್ ಸೆಂಟರ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.
ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವವುಳ್ಳ ಲಕ್ಷ್ಮಿಕಾಂತ ಕುಲಕರ್ಣಿ ಅವರು ಕ್ರಿಯಾಶೀಲರಾಗಿ ಸುಮಾರು ವರ್ಷಗಳಿಂದ ವಿಜಯವಾಣಿ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿರುವ ಇವರ ಅನುಪಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಹೇಳಿದರು .
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜುಲೈ 1 ರಂದು ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಮಠಾಧೀಶರು, ರಾಜಕೀಯ, ಧುರೀಣರು, ಮಾಧ್ಯಮ ಹಿರಿಯ ಮಿತ್ರರು, ಪ್ರಗತಿಪರ ಚಿಂತಕರು, ಸಾಹಿತಿಗಳು ಭಾಗವಹಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…