ಕಲಬುರಗಿ: ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಜನರು ಪ್ರಾಣಬಿಡುತ್ತಿರುವ ಘಟನೆಗಳು ನಡೆಯುತ್ತಿದ್ದರೂ. ನಗರದಲ್ಲಿ ಆಕ್ಸಿಜನ್ ಪೂರೈಕೆಯನ್ನು ನಿರ್ಲಕ್ಷ್ಯಸಿ ಬೇರೆ ರಾಜ್ಯಗಳಿಗೆ ಆಕ್ಸಿಜನ್ ಪೂರೈಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ನಗರದ ನದೂರ ಹತ್ತಿರ ವಿಜಯ ಆಕ್ಸಿಜನ್ ಉತ್ಪದಾಕ ಕಂಪನಿ ಮಹಾರಾಷ್ಟ್ರಕ್ಕೆ ಆಕ್ಸಿಜನ್ ರವಾನೆ ಮಾಡುತ್ತಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರಾದ ರಿಯಾಜ್ ಖತೀಬ್ ತಿಳಿಸಿದ್ದಾರೆ.
ಇತ್ತೀಚೆಗೆ ಆಕ್ಸಿಜನ್ ಕೊರತೆಯಿಂದಾಗಿ ಕೆಬಿಎನ್ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಾದೆರೆಂದು ಹೇಳಲಾಗುತ್ತಿದ್ದು, ಜಿಲ್ಲೆಯಲ್ಲಿ ರೋಗಿಗಳು ಆಕ್ಸಿಜನ್ ಗಾಗಿ ಪರಾದಡುತ್ತಿರುವ ಸನ್ನಿವೇಶ ಪ್ರತಿ ನಿತ್ಯ ನಡೆಯುತ್ತಿವೆ
ಜಿಲ್ಲೆಯಲ್ಲಿ ಏಶಿಯನ್ ಮತ್ತು ವಿಜಯ ಆಕ್ಸಿಜನ್ ಉತ್ಪಾದನಾ ಘಟಕಗಳು ಕಾರ್ಯಾನಿರ್ವಹಿಸುತ್ತಿದ್ದು, ಏಶಿಯನ್ ಆಕ್ಸಿಜನ್ ಉತ್ಪಾದಕ ಕಂಪನಿ ಆಕ್ಸಿಜನ್ ಪೂರೈಕೆ ಕಾರ್ಯಾದಲ್ಲಿ ತೊಡಗಿದೆ. ಆದರೂ ಸಹ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಎದುರಾಗಿದೆ.
ಇಂತಹ ಸಂದರ್ಭದಲ್ಲಿ ವಿಜಯ ಆಕ್ಸಿಜನ್ ಉತ್ಪಾದಕ ಕಂಪನಿ ರೂ. 400 ಆಕ್ಸಿಜನ್ ಸಿಲಿಂಡರ್ ನ್ನು ಮಹಾರಾಷ್ಟ್ರಕ್ಕೆ ಸಾವಿರ ರೂಪಾಯಿಗಳಿಗೆ ಮಾರಾಟ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯ ಕೆಬಿಎನ್ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಿಗೆ ರಾಯಚೂರು ಮೂಲದ ಆಕ್ಸಿಜನ್ ಕಂಪನಿ ಪೂರೈಕೆ ಮಾಡುತ್ತಿತ್ತು. ಆದರೆ ಸದ್ಯ ಕಂಪನಿ ಆಕ್ಸಿಜನ್ ಪೂರೈಕೆ ನಿಲ್ಲಿಸಿದೆ. ಇದರಿಂದ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದೆ. ಶೀಘ್ರದಲ್ಲಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೇರಿದಂತೆ ಉನ್ನತ ಅಧಿಕಾರಿಗಳಿಗೆ ವಾಟ್ಸಪ್ ಮೂಲಕ ದೂರು ನೀಡಿ ಅವರು ಮನವಿ ಮಾಡಿದ್ದಾರೆ.