ಬಿಸಿ ಬಿಸಿ ಸುದ್ದಿ

ಶರಣು ಸಲಗರ್ ಗೆಲುವು” ದಲಿತ ಸಮುದಾಯದ ಶೇ.90 ರಷ್ಟು ಮತ: ಅಂಬಾರಾಯ ಅಷ್ಠಗಿ

ಕಲಬುರಗಿ: ಬಸವಕಲ್ಯಾಣ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಗೆಲುವು ಅತ್ಯಂತ ಹರ್ಷ ಉಂಟು ಮಾಡಿದೆ ಎಂದು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ನಂತರ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ತನ್ನ ಅಭ್ಯರ್ಥಿಯನ್ನು ನಿಲ್ಲಿಸಿ ಡಾ ಅಂಬೇಡ್ಕರ್ ರವರನ್ನು ಎರಡು ಬಾರಿ ಸೋಲಿಸಿತು. ಸಾಕಷ್ಟು ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಇನ್ನಿತರ ಅಧಿಕಾರದಲ್ಲಿರುವ ಅನೇಕ ನಾಯಕರು ಭಾರತರತ್ನ ಪಡೆದರೇ ವಿನಃ, ಡಾ ಬಿ ಆರ್ ಅಂಬೇಡ್ಕರ್ ರವರಿಗೆ ಭಾರತ ರತ್ನ ಪ್ರಶಸ್ತಿ ನೀಡಿಲಿಲ್ಲ. ಭಾರತೀಯ ಜನತಾ ಪಕ್ಷದ ಅಟಲ್ ಬಿಹಾರಿ ವಾಜಪೇಯಿ ಬೆಂಬಲದೊಂದಿಗೆ ರಚಿತವಾದ ವಿಶ್ವನಾಥ ಪ್ರತಾಪ ಸಿಂಗ್ ನೇತೃತ್ವದ ಕಾಂಗ್ರೆಸೇತರ ಸರ್ಕಾರ ಮತ್ತು ಮಾಜಿ ಕೇಂದ್ರ ಸಚಿವ ರಾಮ ವಿಲಾಸ ಪಾಸ್ವಾನ ರವರ ಪರಿಶ್ರಮದ ಫಲವಾಗಿ ವಿ ಪಿ ಸಿಂಗ್ ಸರ್ಕಾರ 1990 ರಲ್ಲಿ ಡಾ ಅಂಬೇಡ್ಕರ್ ರವರನ್ನು ಭಾರತ ರತ್ನ ಪ್ರಶಸ್ತಿ ನೀಡಿ, ಯಾವತ್ತೋ ಸಲ್ಲಬೇಕಾದ ಗೌರವ ಸಲ್ಲಿಸಿ ಕೃತಾರ್ಥವಾಯಿತು.

ಹೀಗಾಗಿ ಕಾಂಗ್ರೆಸ್ ಪಕ್ಷ ಯಾವತ್ತೂ ದಲಿತರಿಗಾಗಿ ವಿಶೇಷ ಯೋಜನೆ ಹಮ್ಮಿಕೊಳ್ಳದೆ. ದಲಿತರನ್ನು ಕೇವಲ ಮತಬ್ಯಾಂಕ ಆಗಿ ಮಾಡಿಕೊಂಡಿತು. ಈಗ ದಲಿತರಲ್ಲಿ ಜಾಗೃತಿ ಮೂಡಿಸುವ ಕೆಲಸ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಛಲವಾದಿ ನಾರಾಯಣ್ ಸ್ವಾಮಿ ಹಾಗೂ ನಮ್ಮೆಲ್ಲ ಪದಾಧಿಕಾರಿಗಳು ಇಡೀ ರಾಜ್ಯಾದ್ಯಂತ ಮಾಡುತ್ತಿದ್ದೇವೆ,ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಲಿತರು ಬಿಜೆಪಿ ಬೆಂಬಲಸಲಿದ್ದಾರೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುದು ಕಾಂಗ್ರೆಸ್ಸಿನ ಅಪಪ್ರಚಾರವಷ್ಟೆ ಇದು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿರೋಧಿಗಳು ಸಂವಿಧಾನದ ಬಗ್ಗೆ ಮಾತನಾಡುವುದು,ಭೂತದ ಬಾಯಲ್ಲಿ ಭಗವದ್ಗೀತೆ ಒದಿಸಿದಂತೆ ಎಂದು ಅಂಬಾರಾಯ ಅಷ್ಠಗಿ ವ್ಯಂಗ್ಯಭರಿತವಾಗಿ ವಿಶ್ಲೇಷಿಸಿದ್ದಾರೆ.

ಬಸವಕಲ್ಯಾಣ ಉಪಚುನಾವಣೆಯಲ್ಲಿ ದಲಿತ ಮತಗಳನ್ನು ಸೆಳೆಯುವ ಸಲುವಾಗಿ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನಕುಮಾರ ಕಟೀಲ ರವರು ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣ್ ಸ್ವಾಮಿ ಯವರು ಮಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬಸವಕಲ್ಯಾಣಕ್ಕೆ ಬಂದು ಸ್ಥಳೀಯ ದಲಿತ ಮುಖಂಡರಾದ ರವಿ ಗಾಯಕವಾಡ ಮತ್ತು ಇತರೆ ಪ್ರಭಾವಿ ನಾಯಕರು ಕಾಂಗ್ರೆಸ್ ತೋರೆದು ಬಿಜೆಪಿ ಸೇರಿದರು.ಇದು ಬಿಜೆಪಿ ಆನೆಬಲ ನೀಡಿತು ರಾಜ್ಯ ಬಿಜೆಪಿ ನಾಯಕರು ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಪದಾಧಿಕಾರಿಗಳಾದ ಮಾಜಿ ಶಾಸಕ ನಂಜುಂಡಸ್ವಾಮಿ, ಮಾಜಿ ಶಾಸಕ ವೈ ಸಂಪಂಗಿ, ಬಿಜೆಪಿ ರಾಷ್ಟ್ರೀಯ ಎಸ್ ಸಿ ಮೋರ್ಚಾ ಕಾರ್ಯದರ್ಶಿ ಜಯಕುಮಾರ ಕಾಂಗೆ ಮತ್ತು ಬೀದರ್ ಜಿಲ್ಲೆಯ ಎಸ್ ಸಿ ಮೋರ್ಚಾ ಪದಾಧಿಕಾರಿಗಳು ಎಲ್ಲರೂ ಸೇರಿ ವಿಶೇಷವಾಗಿ ದಲಿತ ಮತಗಳನ್ನು ಶೇ.90% ಪ್ರತಿಶತ ಮತಗಳು ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಅವರಿಗೆ ಬೀಳುವಂತೆ ನೋಡಿಕೊಂಡರು.

ಹೀಗಾಗಿ ಈ ಬೆಳವಣಿಗೆಯು ದಲಿತ ಸಮುದಾಯವು ರಾಜ್ಯದಲ್ಲಿ ಬಿಜೆಪಿ ಪರ ವಾಲುತ್ತಿರುವುದರ ಸಂಕೇತವಾಗಿದೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಯವರ ಜನಪರ ಆಡಳಿತ ಮತ್ತು ಮೋದಿ ಯವರು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಸಲ್ಲಿಸುತ್ತಿರುವ ಗೌರವವು ಸಹ ದಲಿತ ಸಮುದಾಯಕ್ಕೆ ಸಂತಸ ತಂದಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪನವರ ಅಭಿವೃದ್ಧಿ ಕಾರ್ಯಕ್ರಮಗಳು ಈ ಚುನಾವಣೆ ಗೆಲ್ಲಲು ಸಹಕಾರಿಯಾಗಿದೆ.

ಉಪಮುಖ್ಯಮಂತ್ರಿಳಾದ ಲಕ್ಷ್ಮಣ್ ಸವದಿ,ಗೃಹ ಸಚಿವ ಬಸವರಾಜ ಬೊಮ್ಮಾಯಿ,ವಸತಿ ಸಚಿವ ವಿ ಸೋಮಣ್ಣ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ,ಬೀದರ್ ಹಾಗೂ ಕಲಬುರಗಿ ಸಂಸದರಾದ ಭಗವಂತ ಖುಬಾ, ಡಾ ಉಮೇಶ್ ಜಾಧವ,ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವಥ್ ನಾರಾಯಣ,ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಅಮರನಾಥ ಪಾಟೀಲ್ ಮಹಾಗಾಂವ ಹಾಗೂ ಸ್ಥಳೀಯ ನಾಯಕರ ಮತ್ತು ಅಸಂಖ್ಯಾತ ಕಾರ್ಯಕರ್ತರ ಪರಿಶ್ರಮದಿಂದ ಬಸವಕಲ್ಯಾಣದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಬಸವಕಲ್ಯಾಣ ಉಪಚುನಾವಣೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೋಡಗಿಸಿಕೋಂಡಿದ್ದ ಅಂಬಾರಾಯ ಅಷ್ಠಗಿ ಹೇಳಿದ್ದಾರೆ.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

37 mins ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

40 mins ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

43 mins ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

48 mins ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

53 mins ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

58 mins ago