ಗ್ರಾಮ ಪಂಚಾಯತಿಯಲ್ಲಿ ಕೊರೊನಾ ಟಾಸ್ಕ್‌ಫೋರ್ಸ್ ಸಭೆ

0
143

ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಕೊರೊನಾ ಟಾಸ್ಕ್‌ಫೋರ್ಸ್ ಸಭೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಇಒ ಅಂಬ್ರೇಶ ಅವರು ಮಾತನಾಡಿ,ಕೊರೊನಾ ಜಾಗೃತಿ ಇಂದು ಗ್ರಾಮೀಣ ಭಾಗದಲ್ಲಿ ಅತ್ಯವಶ್ಯಕವಾಗಿದ್ದು ಎಲ್ಲಾ ನಮ್ಮ ಟಾಸ್ಕ್‌ಫೋರ್ಸ್ ಸದಸ್ಯರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರತಿ ಮನೆಗೂ ಭೇಟಿ ನೀಡುವ ಮೂಲಕ ಕೋವಿಡ್ ನಿಯಮಗಳ ಪಾಲನೆಯ ಬಗ್ಗೆ ಜಾಗೃತಿಯನ್ನು ಮೂಡಿಸುವಂತೆ ತಿಳಿಸಿದರು.

Contact Your\'s Advertisement; 9902492681

ತಿಂಥಣಿ ಗ್ರಾಮ ಪಂಚಾಯತಿಯಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್ ಸಭೆ

ನಂತರ ಗ್ರಾಮ ಪಂಚಾಯತಿ ಅಧ್ಯಕ್ಷ ಭಿಮಣ್ಣ ದೀವಳಗುಡ್ಡ ಮಾತನಾಡಿ,ಗ್ರಾಮದಲ್ಲಿನ ಎಲ್ಲಾ ೪೫ ವರ್ಷ ಮೇಲ್ಪಟ್ಟವರು ಸರಕಾರಿ ಆಸ್ಪತ್ರೆಗೆ ತೆರಳಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಮತ್ತು ಬೆಂಗಳೂರು ಪೂನಾಗಳಿಗೆ ಹೋಗಿ ಬಂದಿರುವವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಲು ಎಲ್ಲಾ ವಾರಿಯರ್ಸ್‌ಗಳಿಗೆ ಸೂಚಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ರವಿಚಂದ್ರರಡ್ಡಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ವೆಂಕಟೇಶ ಬೇಟೆಗಾರ ಹಾಗು ಪೊಲೀಸ್ ಸಿಬ್ಬಂದಿಗಳಾದ ಚಂದ್ರಶೇಖರ ದೇವಿಂದ್ರ ದೊರೆ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗು ಗ್ರಾ.ಪಂ ಸಿಬ್ಬಂದಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here