ವಿವಿಧ ಬೇಡಿಕೆಗಳ ಈಡೇರಿಸಲು ಜೆಡಿಎಸ್ ಮುಖಂಡರಿಂದ ಜಿಲ್ಲಾಧಿಕಾರಿಗೆ ಮನವಿ

0
11

ಸುರಪುರ: ತಾಲೂಕಿನ  ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜೆಡಿಎಸ್ ಪಕ್ಷದ ಮುಖಂಡರು ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ್ ಮಾತನಾಡಿ,ಕೊರೊನಾ ಎರಡನೇ ಅಲೆ ಈಗ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ತಡೆಗಟ್ಟಲು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸ್ಯಾನಿಟೈಜ್ ಮಾಡಿಸಬೇಕು, ಅಲ್ಲದೆ ಗ್ರಾಮೀಣ ಪ್ರದೇಶದಲ್ಲಿಯೂ ಕೂಡ ಕೊರೊನಾ ಪರೀಕ್ಷೆಯನ್ನು ನಡೆಸಿ ಸೊಂಕಿತರನ್ನು ಪತ್ತೆ ಹಚ್ಚುವ ಕೆಲಸ ನಡೆಯಬೇಕು.

Contact Your\'s Advertisement; 9902492681

ರಾಜುಗೌಡ ಸೇವಾ ಸಮಿತಿಯಿಂದ ಕೋವಿಡ್ ಸೊಂಕಿತರಿಗೆ ಹಣ್ಣು ವಿತರಣೆ

ಕಲಬುರ್ಗಿ ಮತ್ತು ಬೀದರ ಜಿಲ್ಲೆಗಳಲ್ಲಿ ಸೊಂಕಿತರ ಪ್ರಮಾಣ ಹೆಚ್ಚುತ್ತಿದ್ದು ಸುರಪುರ ನಗರಕ್ಕೆ ಕಲಬುರ್ಗಿ ಕಡೆಯಿಂದ ಬರುವವರ ಕೊರೊನಾ ಪರೀಕ್ಷೆಗಾಗಿ ಬಸ್ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಬೇಕು.ಇನ್ನೂ ಹೆಚ್ಚಿನ ಕೋವಿಡ್ ಆಸ್ಪತ್ರೆಗಳನ್ನು ಆರಂಭಿಸುವ ಜೊತೆಗೆ ಆಕ್ಸಿಜನ್ ಮತ್ತಿತರೆ ವ್ಯವಸ್ಥೆಯನ್ನು ಕಲ್ಪಿಸಬೇಕು.ಗ್ರಾಮೀಣ ಪ್ರದೇಶದ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಗ್ರಾಮೀಣ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಮತ್ತು ಈಗ ಮುಸ್ಲಿಂ ಬಾಂಧವರು ರಮ್ಜಾನ್ ತಿಂಗಳಾಗಿದ್ದು ಇಂತಹ ಸಂದರ್ಭದಲ್ಲಿ ಕೆಲವು ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟಿದ್ದು ಅವುಗಳನ್ನು ದುರಸ್ಥಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ನಂತರ ಗ್ರೇಡ-೨ ತಹಸೀಲ್ದಾರರಾದ ಸೋಫಿಯಾ ಸುಲ್ತಾನರ ಮೂಲಕ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಸಂಗಣ್ಣ ಬಾಕ್ಲಿ ತಿಪ್ಪಣ್ಣ ಪೊಲೀಸ್ ಪಾಟೀಲ್ ವಕೀಲ ಎಸ್.ಬಿ.ತೇಲ್ಕರ್ ಅಪ್ಪಣ್ಣ ಗಾಯಕ್ವಾಡ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here