ಕಲಬುರಗಿ: ಮಹಾನಗರ ಪಾಲಿಕೆಯ ವತಿಯಿಂದ ವೈಯಕ್ತಿಕ ಶೌಚಾಲಯ ಯೋಜನೆಯಡಿ ಶೇಕಡಾ 22.75ರಷ್ಟು ಅಡಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಂಗಳವಾರ ಜೈ ಕನ್ನಡಿಗರ ಸೇನೆಯ ಕಾರ್ಯಕರ್ತರು ಮಹಾನಗರ ಪಾಲಿಕೆಯ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸಿದರು.
ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಎಸ್. ಭಾಸಗಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಗನ್ನಾಥ್ ಸೂರ್ಯವಂಶಿ, ರಾಮಾ ಪೂಜಾರಿ, ಅಮರ್ ಯಾದವ್, ಸಂತೋಷ್ ಹಾವನೂರ್, ಸಂಜೀವಕುಮಾರ್ ಮಾಳಗಿ, ನವೀನ್ ಸಿ.ಪಿ., ರಾಣೋಜಿ ಜಾನಯ್ಯ, ಶೀಲಾ, ಮಾಲಾ (ಮಂಗಳಮುಖಿಯರು), ಸುಂದರ್ ಬೈರಾಮಡಗಿ, ರವಿ ಸಾಹುಕಾರ್, ವಿಠಲರಾವ್ ಸುಗಂಧಿ, ವಿಜರಾಜ್ ಕಲಶೆಟ್ಟಿ, ದತ್ತು ಸುಗಂಧಿ, ಗುಂಡು ಪಾಟೀಲ್, ರಾಜು ಮೂಲಗೆ, ಸಿದ್ದು ಕಂಬಾಳೆ, ವಿರೇಶ್, ಶೇಷಗಿರಿ ಮರತೂರಕರ್ ಮುಂತಾದವರು ಪಾಲ್ಗೊಂಡಿದ್ದರು.
ಪ್ರತಿಭಟನೆಕಾರರು ನಂತರ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿ, ಶೇಕಡಾ ೨೨.೭೫ರ ಯೋಜನೆಯಡಿ ನಗರದ ಬುದ್ಧನಗರ, ತಾರಫೈಲ್, ಬಿದ್ದಾಪೂರ್ ಕಾಲೋನಿ ಮುಂತಾದ ಬಡಾವಣೆಗಳಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡುವುದರಲ್ಲಿ ಲಕ್ಷಾಂತರ ರೂ.ಗಳ ಅವ್ಯವಹಾರ ಆಗಿದೆ ಎಂದು ಆರೋಪಿಸಿದರು.
ಸಂಬಂಧಪಟ್ಟ ಗುತ್ತಿಗೆದಾರ ಜಾಕೀರ್ ಅವರು ಒಟ್ಟು ೨೫೦ ಶೌಚಾಲಯಗಳನ್ನು ನಿರ್ಮಿಸಬೇಕಾಗಿತ್ತು. ಆದಾಗ್ಯೂ, ಕೇವಲ ೧೦೦ರಿಂದ ೧೨೦ ಶೌಚಾಲಯಗಳನ್ನು ನಿರ್ಮಿಸಿ ಬೇರೆ ಯಾರದೋ ಶೌಚಾಲಯದ ಮುಂದೆ ಯಾರನ್ನೋ ನಿಲ್ಲಿಸಿ ಭಾವಚಿತ್ರ ತೆಗೆದು ಕಾರ್ಯಾಲಯಕ್ಕೆ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಎಂದು ಅವರು ದೂರಿದರು.
ಈ ಕುರಿತು ಸೂಕ್ತ ತನಿಖೆಯ ಮೂಲಕ ಸಂಬಂಧಿಸಿದ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…