ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಮೌನ ಪ್ರತಿಭಟನೆ

ಶಹಾಬಾದ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಬುಧವಾರ ನಗರದ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿ ಗ್ರೇಡ್-2 ತಹಸೀಲ್ದಾರ ವೆಂಕನಗೌಡ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಿಜೆಪಿ ಮುಖಂಡ ನಾಗರಾಜ ಮೇಲಗಿರಿ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ನಂತರ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆಗಳು ಖಂಡನೀಯ ಎಂದು ತಿಳಿಸಿದರು.

ಚುನಾವಣೆಯ ಫಲಿತಾಂಶದ ನಂತರ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುತ್ತಿರುವುದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದರು.

ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಮೌನ ಪ್ರತಿಭಟನೆ

ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಹಲವಾರು ಮಂದಿ ಜೀವತೆತ್ತಿದ್ದು ಇದು ಬೇಸರ ತಂದಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅರುಣ ಪಟ್ಟಣಕರ್, ಬಿಜೆಪಿ ಅವರು ಸ್ಥಳೀಯ ಸರ್ಕಾರ ಬಿಜೆಪಿ ಕಾರ್ಯಕರ್ತರ ರಕ್ಷಣೆ ಒತ್ತು ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಯುವಮೋರ್ಚಾ ವತಿಯಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಮೌನ ಪ್ರತಿಭಟನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಭಿತ್ತಿ ಫಲಕಗಳನ್ನು ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಗ್ರೇಡ್-2 ತಹಸೀಲ್ದಾರ ವೆಂಕನಗೌಡ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಕುಂಬಾರ, ಸಿದ್ರಾಮ ಕುಸಾಳೆ,ಉಪಾಧ್ಯಕ್ಷ ಶ್ರೀಧರ ಜೋಶಿ, ಪ್ರಮುಖರಾದ ಅನಿಲ ಬೋರಗಾಂವಕರ,ನಿಂಗಣ್ಣ ಹುಳಗೋಳಕರ, ಶಂಕರ ಕುಂಬಾರ, ಶಿವಕುಮಾರ ರಾಮಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ದಿನೇಶ ಗೌಳಿ, ಎಸ್‍ಸಿ ಮೋರ್ಚಾ ಅಧ್ಯಕ್ಷ ಸಂಜಯ ವಿಟ್ಕರ, ಶರಣು ಕವಲಗಿ, ಸುನೀಲ ಕುಂಬಾರ ಉಪಸ್ಥಿತರಿದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

2 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

3 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

5 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

16 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

18 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420