ಕಲಬುರಗಿ: ಔರಾದಕರ್ ವರದಿಯನ್ನು ಕೂಡಲೇ ಜಾರಿಗೊಳಿಸುವಂತೆ ಹಾಗೂ ಹಿಂಬಡ್ತಿಯಾದ ಹೈದ್ರಾಬಾದ್ ಕರ್ನಾಟಕ ಪೋಲಿಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಸಂದೀಪ್ ಪಿ. ಭರಣಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅನಿಲ್ ಪೂಜಾರಿ, ವಿಶ್ವಾ ಡೇಕೂನ್, ಗೌತಮ್ ಗಣಜಲಖೇಡ್, ಅಭಿಲಾಷ್ ದರ್ಗಿ, ಸೂರ್ಯಕಾಂತ್ ಪೂಜಾರಿ, ಶಾಂತು ಡೊಣ್ಣೂರ್ ಮುಂತಾದವರು ಪಾಲ್ಗೊಂಡಿದ್ದರು.
ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಗೃಹ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಜನರು ನೆಮ್ಮದಿಯಿಂದ ಹಾಗೂ ಶಾಂತಿಯಿಂದ ಜೀವನ ಸಾಗಿಸಬೇಕಾದರೆ ಪೋಲಿಸರ ಪಾತ್ರ ಬಹುಮುಖ್ಯವಾಗಿದೆ. ಪೋಲಿಸ್ ಇಲಾಖೆಯವರು ತಮ್ಮ ಕಷ್ಟ, ಕಾರ್ಪಣ್ಯಗಳನ್ನು ಬದಿಗೊತ್ತಿ ಜನತೆಗಾಗಿ ಕೆಲಸವನ್ನು ಮಾಡುತ್ತಾರೆ. ಆದಾಘ್ಯೂ, ಅವರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪೋಲಿಸರಿಗೆ ಅಗತ್ಯ ಸೌಲಭ್ಯಗಳನ್ನು ಒದಿಗಿಸುವ ದಿಸೆಯಲ್ಲಿ ರಾಜ್ಯ ಸರ್ಕಾರದ ಮುಂದಿರುವ ರಾಘವೇಂಧ್ರ ಔರಾದಕರ್ ಅವರ ವರದಿಯನ್ನು ಜಾರಿಗೊಳಿಸಬೇಕು ಹಾಗೂ ಹೈದ್ರಾಬಾದ್ ಕರ್ನಾಟಕದ ಭಾಗದವರಿಗೆ ೩೭೧(ಜೆ) ಅಡಿಯಲ್ಲಿ ಬಡ್ತಿಯಾಗಬೇಕಾದವರಿಗೆ ಹಿಂಬಡ್ತಿಯಾಗಿ ಅನ್ಯಾಯವಾಗಿದ್ದು, ರಾಜ್ಯದ ಗೃಹ ಸಚಿವರು ಹತ್ತು ದಿನಗಳೊಳಗೆ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದಾರೆ. ಅದು ಇಲ್ಲಿಯವರೆಗೆ ಅನುಷ್ಟಾನಕ್ಕೆ ಬಂದಿಲ್ಲ. ಆದ್ದರಿಂದ ಕೂಡಲೇ ಎರಡು ಬೇಡಿಕೆಗಳನ್ನು ಇಡೇರಿಸಬೇಕು ಎಂದು ಅವರು ಒತ್ತಾಯಿಸಿದರು.
ಒಂದು ವೇಳೆ ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…