ಕಲಬುರಗಿ: ತಾಯಿಗೆ ಆಮ್ಲಜನಕ ಕೊಡಿಸಿ ಎಂದು ಕಣ್ಣೀರಿಟ್ಟಿದ್ದ ಸಿಆರ್ಪಿಎಫ್ ಯೋಧ ಸಂಜೀವ ಪವಾರ ಅವರ ತಾಯಿ ನಿರ್ಮಲಾ ಪವಾರ ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಸಿಆರ್ಪಿಎಫ್ ಯೋಧ ಸಂಜೀವ ಪವಾರ ಅವರ ತಾಯಿಯನ್ನು ಉಳಿಸಿಕೊಳ್ಳಲು ಕಾಶ್ಮೀರದಿಂದಲೇ ಕಣ್ಣೀರಿಡುತ್ತಾ ವಿಡಿಯೊ ಮಾಡಿದ ತಾಯಿಯ ಪರಿಸ್ಥಿತಿ ವಿವರಿಸಿದ್ದರು. ಇದನ್ನು ಗಮನಿಸಿದ ಹಲವರು ಜಿಲ್ಲಾಡಳಿತದ ಗಮನಕ್ಕೆ ತಂದ್ದು, ರಾತ್ರಿ ಯೋಧನ ತಾಯಿಗೆ ಇಲ್ಲಿನ ಜಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆಸ್ತಮಾದಿಂದ ಬಳಲುತ್ತಿದ್ದ ನಿರ್ಮಲಾ ಕೋವಿಡ್ ತಪಾಸಣೆ ಒಳಪಡಿಸಲಾಗಿತ್ತು. ಬುಧವಾರ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿತ್ತು. ಡಾ.ಜಗದೀಶ್ ನೇತೃತ್ವದ ತಂಡ ಪ್ರಯತ್ನಪಟ್ಟರೂ ಅವರನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದು ಆಸ್ಪತ್ರಗೆ ಸೇರಿಸಲು ಶ್ರಮಿಸಿದ್ದ ಎಚ್ ಕೆಸಿಸಿಐ ಮಾಜಿ ಅಧ್ಯಕ್ಷ ಅಮರನಾಥ ಪಾಟೀಲ ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…