ಕಲಬುರಗಿ; ಅಂಧರಿಗೆ ಅನುಕಂಪ ಬೇಡ, ಅವರಿಗೆ ಅವಕಾಶಗಳನ್ನು ಕೊಡಿ ಎಂದು ಅಫಜಲಪೂರ್ ತಾಲ್ಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಆನಂದ್ ಎಸ್. ಆಲಮೇಲಕರ್ ಅವರು ಇಲ್ಲಿ. ಕರೆ ನೀಡಿದರು.
ಜಿಲ್ಲೆಯ ಅಫಜಲಪೂರ್ ಪಟ್ಟಣದಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಧರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ದಿಸೆಯಲ್ಲಿ ಸರ್ಕಾರ ಹಾಗೂ ಸಾರ್ವಜನಿಕರು ಕಾರ್ಯನಿರ್ವಹಿಸಬೇಕಾಗಿದೆ.
ಅಂಧರ ಕುರಿತು ಕೇವಲ ಅನುಕಂಪದ ಮಾತುಗಳನ್ನು, ಹೇಳಿ ಹೋಗುವಂತಹ ಕೆಲಸ ಆಗಬಾರದು. ಅಂಧರಲ್ಲಿಯೂ ಸಹ ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಿಸಲು ಅವಕಾಶ ಕೊಡಬೇಕು ಎಂದು ಅವರು ಸಲಹೆ ಮಾಡಿದರು. ಅಂಧರು ಸಹ ವೃತ್ತಿ ನಿಪುಣರಾಗಿದ್ದಾರೆ. ಹಲವಾರು ಕೆಲಸ, ಕಾರ್ಯಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುತ್ತಾರೆ. ಆದ್ದರಿಂದ ಅವರಿಗೆ ಸಮಾಜದಲ್ಲಿ ಕಡೆಗಣಿಸುವ ಬದಲು ಅವರಿಗೆ ಅವಕಾಶ ಕೊಡುವ ಮೂಲಕ ಅವರ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಶೇಕಡಾ ೮೫ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…