ಸುರಪುರ: ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಇಂದು (ಶುಕ್ರವಾರ) ೧೦ ಗಂಟೆಗೆ ನಗರಕ್ಕೆ ಭೇಟಿ ನೀಡಲಿದ್ದಾರೆ.ಕಳೆದ ಅನೇಕ ದಿನಗಳಿಂದ ಜಿಲ್ಲೆಯ ಜನರು ಹಾಗು ಅನೇಕ ಸಂಘಟನೆಗಳ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆಯಾಗಿರುವ ಕುರಿತು ಅಸಮಧಾನ ವ್ಯಕ್ತಪಡಿಸಿದ್ದರು.
ಇದೆಲ್ಲವನ್ನು ಗಮನಿಸಿರುವ ಸಚಿವರು ಕೊನೆಗೆ ಎಚ್ಚೆತ್ತು ಇಂದು ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ನಡೆಸಿ ತಾಲೂಕಿನಲ್ಲಿಯ ಕೊರೊನಾ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಾಲೂಕು ಆಡಳಿತದ ವತಿಯಿಂದ ಪ್ರಕಟಣೆ ಮೂಲಕ ತಿಳಿಸಿದ್ದಾರೆ.