ಸುರಪುರ: ನಗರದಲ್ಲಿನ ಅಗತ್ಯ ವಸ್ತುಗಳ ಮಾರಾಟದ ಸಮಯವನ್ನು ಬೆಳಿಗ್ಗೆ ೦೬ ಗಂಟೆಯಿಂದ ೧೦ ಗಂಟೆಯ ವರೆಗೆ ನಿಗದಿಗೊಳಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಜೀವನಕುಮಾರ್ ಕಟ್ಟಿಮನಿ ತಿಳಿಸಿದ್ದಾರೆ.
ಈ ಕುರಿತು ನಗರಸಭೆಯಿಂದ ಪ್ರಕಟಣೆ ಹೊರಡಿಸಿರುವ ಪೌರಾಯುಕ್ತರು ಇದುವರೆಗೆ ಜನರು ಅಗತ್ಯ ವಸ್ತುಗಳ ಖರಿದಿಸಲು ಮತ್ತು ಅಂಗಡಿಗಳ ತೆರೆಯಲು ೦೬ ರಿಂದ ೧೨ರ ವರೆಗೆ ಅವಕಾಶ ನೀಡಲಾಗಿತ್ತು,ಆದರೆ ಈಗ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಸಮಯವನ್ನು ಬದಲಾವಣೆ ಮಾಡಿ ಬೆಳಿಗ್ಗೆ ೦೬ ಗಂಟೆಯಿಂದ ೧೦ ಗಂಟೆಯವರೆಗೆ ಅವಕಾಶ ನೀಡಲಾಗಿದ್ದು,ಈ ಸಮಯದಲ್ಲಿ ಜನರು ಅಗತ್ಯ ವಸ್ತುಗಳನ್ನು ಖರಿದಿಸಬಹುದು ಮತ್ತು ಕಿರಾಣಿ ತರಕಾರಿ ಹಣ್ಣ ಹಾಲು ಬೇಕರಿ ತೆಗೆಯಲು ಅವಕಾಶ ನೀಡಲಾಗಿದೆ ಎಂದು ತಿಳಿಸಿ,ನಗರದ ಜನತೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಅಲ್ಲದೆ ಜನರು ಮನೆಯಿಂದ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಅನಗತ್ಯವಾಗಿ ಜನರು ಮನೆಯಿಂದ ಹೊರ ಬರದೆ ಮನೆಯಲ್ಲಿ ಇರುವ ಮೂಲಕ ಕೊರೊನಾ ನಿರ್ಮೂಲನೆಗೆ ಸಹಕರಿಸುವಂತೆ ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…