ಕೋವಿಡ್ ಲಸಿಕೆ ಪಡೆದುಕೊಂಡು ಜಾಗೃತಿ

0
22

ಕಲಬುರಗಿ: ಕೋವಿಡ್ ವಿರುದ್ಧ ಗೆಲುವು ಸಾಧಿಸಲು ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಕೋವಿಡ್ ಸಂಪೂರ್ಣವಾಗಿ ತೊಲಗುವವರೆಗೂ ಸುರಕ್ಷತಾ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ಶರಣ ಸಾಹಿತಿ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ನಗರದ ಮಕ್ತಂಪೂರ ಬಡಾವಣೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಂಸ್ಕೃತಿಕ ಬಳಗ ಹಾಗೂ ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯರು ಕೋವಿಡ್ ಲಸಿಕೆ ಪಡೆದುಕೊಂಡ ನಂತರ ನಗರದಲ್ಲಿ ಕೋವಿಡ್ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ನ್ಯಾಯವಾದಿ ಚಂದ್ರಕಾಂತ ಕಾಳಗಿ ಮಾತನಾಡಿ, ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ. ಭಯ ಮತ್ತು ಆತಂಕವನ್ನು ಬಿಟ್ಟು ಎಲ್ಲರೂ ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಡಿ.ಬಡಿಗೇರ, ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್‌ನ ಮುಖ್ಯಸ್ಥರಾದ ಮಾಲಾ ದಣ್ಣೂರ, ಮಾಲಾ ಕಣ್ಣಿ, ಮಹೇಶ ಪಾಟೀಲ, ಕಲ್ಯಾಣಿ ಕಣ್ಣಿ, ಪ್ರಮುಖರಾದ ಭುವನೇಶ್ವರಿ ಹಳ್ಳಿಖೇಡ, ಸುರೇಶ ವಗ್ಗೆ, ಮೀನಾಕ್ಷಿ ಕುಂಬಾರ, ಶಿವಾನಂದ ಮಠಪತಿ, ವಿಜಯ ಪುರಾಣಿಕ ಸೇರಿದಂತೆ ಆರೋಗ್ಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here