ಕಲಬುರಗಿ: ಕೋವಿಡ್ ವಿರುದ್ಧ ಗೆಲುವು ಸಾಧಿಸಲು ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಕೋವಿಡ್ ಸಂಪೂರ್ಣವಾಗಿ ತೊಲಗುವವರೆಗೂ ಸುರಕ್ಷತಾ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ಶರಣ ಸಾಹಿತಿ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.
ನಗರದ ಮಕ್ತಂಪೂರ ಬಡಾವಣೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಂಸ್ಕೃತಿಕ ಬಳಗ ಹಾಗೂ ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯರು ಕೋವಿಡ್ ಲಸಿಕೆ ಪಡೆದುಕೊಂಡ ನಂತರ ನಗರದಲ್ಲಿ ಕೋವಿಡ್ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನ್ಯಾಯವಾದಿ ಚಂದ್ರಕಾಂತ ಕಾಳಗಿ ಮಾತನಾಡಿ, ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ. ಭಯ ಮತ್ತು ಆತಂಕವನ್ನು ಬಿಟ್ಟು ಎಲ್ಲರೂ ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಡಿ.ಬಡಿಗೇರ, ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್‌ನ ಮುಖ್ಯಸ್ಥರಾದ ಮಾಲಾ ದಣ್ಣೂರ, ಮಾಲಾ ಕಣ್ಣಿ, ಮಹೇಶ ಪಾಟೀಲ, ಕಲ್ಯಾಣಿ ಕಣ್ಣಿ, ಪ್ರಮುಖರಾದ ಭುವನೇಶ್ವರಿ ಹಳ್ಳಿಖೇಡ, ಸುರೇಶ ವಗ್ಗೆ, ಮೀನಾಕ್ಷಿ ಕುಂಬಾರ, ಶಿವಾನಂದ ಮಠಪತಿ, ವಿಜಯ ಪುರಾಣಿಕ ಸೇರಿದಂತೆ ಆರೋಗ್ಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…