ಕಲಬುರಗಿ: ರಾಜ್ಯದಲ್ಲಿ ಕೊರೊನಾ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಅವ್ಯವಹಾರವನ್ನು ಉನ್ನತ ಮಟ್ಟದ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ರಾಜ್ಯ ಭ್ರಷ್ಟಾಚಾರ ನಿರ್ಮೂಲನ ದಳ ರಾಜ್ಯಾಧ್ಯಕ್ಷ ಡಾ.ಎ.ಎಸ್.ಭದ್ರಶೆಟ್ಟಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ದಿನ ನಿತ್ಯ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಬಗ್ಗೆ ಜನರು ಭಯಭೀತರಾಗಿದ್ದಾರೆ.ಲಕ್ಷಾಂತರ ಜನರು ಸೋಂಕಿಗೆ ಗುರಿಯಾಗಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ.ಪರಿಸ್ಥಿತಿ ಹೀಗಿರುವಾಗ ಭ್ರಷ್ಟರು ಕೊವೀಡ ಹೆಸರಿನಲ್ಲಿ ಜನರನ್ನು ಲೂಟಿ ಮಾಡುತ್ತಿದ್ದಾರೆ.ಬೆಡ್ ದಂಧೆ, ಕಾಳಸಂತೆಯಲ್ಲಿ ಅಕ್ರಮವಾಗಿ ರೆಮ್ ಡಿಸಿವರ ಮಾರಾಟ . ಅಷ್ಟೇ ಅಲ್ಲದೆ ಜೀವವಾಯು ಆಕ್ಸಿಜನ್ ದುಬಾರಿ ಬೆಲೆಗೆ ರಾಜಾರೋಷವಾಗಿ ಮಾರಾಟ ಮಾಡಲಾಗುತ್ತಿದೆ.
ಮನೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಆಕ್ಸಿಜನ್ ಕೊಡಿ
ಸರಕಾರಿ ಆಸ್ಪತ್ರೆಗೆ ಪೂರೈಸುವ ಆಕ್ಸಿಜನ್ ಗಳು ಹಣದ ಆಸೆಗಾಗಿ ರಾತ್ರೋರಾತ್ರಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿವೆ.ಬಡ ಜನರು ಆಕ್ಸಿಜನ್ ಕೊರತೆಯಿಂದ ದಿನ ನಿತ್ಯ ಸಾಯುತ್ತಿದ್ದಾರೆ.ಆದರೆ ಸರಕಾರ ತಪ್ಪಿತಸ್ಥರನ್ನು ಪತ್ತೆ ಹಚ್ಚಲು ಮುಂದಾಗುತ್ತಿಲ್ಲ.ಕಾರಣ ಆರೋಗ್ಯ ಇಲಾಖೆಯ ಅಧಿಕಾರಿಗಳು, ಡಾಕ್ಟರ್ ಗಳು ಸೇರಿದಂತೆ ಅನೇಕರು ಅವ್ಯವಹಾರದಲ್ಲಿ ಶಾಮಿಲಾಗಿರುವುದರಿಂದ ದೂರು ಬಂದರೂ ಕ್ರಮ ಕೈಗೊಳ್ಳದೆ ಪ್ರಕರಣಗಳನ್ನು ಮುಚ್ಚಿಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕಲಬುರಗಿ: ಆಸ್ಪತ್ರೆಯಲ್ಲಿ ಮೃತಪಟ್ಟು ಹತ್ತುಗಂಟೆ ಕಳೆದರು ನೋಡುವವರಿಲ್ಲ
ರಾಜ್ಯದಲ್ಲಿ ಈಗಾಗಲೇ ಆರೋಗ್ಯ ವೈದ್ಯಕೀಯ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ.ಸರಕಾರ ರೋಗಿಗಳಿಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಸಂಪೂರ್ಣ ವಿಫಲವಾಗಿದ್ದು ಇದಕ್ಕೆ ಸಿಎಂ ಹಾಗೂ ಆರೋಗ್ಯ ಸಚಿವರು ಹೊಣೆಯಾಗಿದ್ದಾರೆ.ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಬೇಕು.ಹಾಗೂ ಕೊವೀಡ್ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟಲು ಮುಂದಾಗಬೇಕು ಇಲ್ಲದಿದ್ದರೆ ರಾಜ್ಯ ಭ್ರಷ್ಟಾಚಾರ ನಿರ್ಮೂಲನ ದಳ ಬೀದಿಗಿಳಿದು ಹೋರಾಟ ಮಾಡುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…