ಬೆಂಗಳೂರು: ಜಾಗತಿಕ ಮನ್ನಣೆಯ ಬಹುರಾಷ್ಟ್ರೀಯ ಕಂಪನಿಯಾಗಿರುವ ಅಮೇರಿಕಾದ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕರ್ನಾಟಕ ಸಕಾರಕ್ಕೆ ಸುಮಾರು 3 ಕೋಟಿ ರೂಪಾಯಿಗಳ 86 ಹಾಸಿಗೆಗಳ ಮಾಡ್ಯುಲರ್ ಐ.ಸಿ.ಯು ಘಟಕದ ಕೊಡುಗೆ ನೀಡಿದೆ. ಇದನ್ನು ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಯಲ್ಲಿ ಸ್ಥಾಪನೆ ಮಾಡಲಾಗುವುದು. ಇನ್ನು 3-4 ವಾರಗಳಲ್ಲಿ ಈ ಹೊಸ ಸೌಲಭ್ಯ ಸಿದ್ದವಾಗುವುದು.
ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿಯ ಹಿರಿಯ ಅಧಿಕಾರಿಗಳ ನಿಯೋಗ ಇಂದು ಬೆಳಿಗ್ಗೆ ಮಾನ್ಯ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿ ಈ ಉಪಕ್ರಮವನ್ನು ಘೋಷಿಸಿತು.
ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿಯ ಉಪಕ್ರಮವನ್ನು ಶ್ಲಾಘಿಸಿದ ಮುಖ್ಯಮಂತ್ರಿಗಳು “ಸರ್ಕಾರದೊಂದಿಗೆ ಖಾಸಗಿ ಉದ್ಯಮ ವಲಯವೂ ಕೈಜೋಡಿಸಿ, ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ಆರೋಗ್ಯ ಸೇವೆ ಒದಗಿಸುವುದು ನಮ್ಮ ಉದ್ದೇಶ. ಆರೋಗ್ಯ ಮೂಲಸೌಕರ್ಯವನ್ನು ಇನ್ನೂ ವೇಗವಾಗಿ ಅಭಿವೃದ್ಧಿಪಡಿಸಲು ಕಾರ್ಪೊರೇಟ್ ಕಂಪನಿಗಳು, ಕೈಗಾರಿಕಾ ವಲಯ ಸಿ.ಎಸ್.ಆರ್ ಅನುದಾನವನ್ನು ಬಳಸಿ ತಮಗೆ ಸಾಧ್ಯವಿರುವ ರೀತಿಯಲ್ಲಿ ಜನರಿಗೆ ನೆರವಾಗಬೇಕು ಎಂದರು. ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿಯು 86 ತುರ್ತು ಚಿಕಿತ್ಸಾ ಮಾಡ್ಯುಲರ್ ಐ.ಸಿ.ಯು ಹಾಸಿಗೆ ನೀಡಿರುವುದಕ್ಕೆ ಕಂಪನಿಗೆ ಧನ್ಯವಾದ ಸಲ್ಲಿಸಿದರು”
ಕಂಪನಿಯ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಂ.ಡಿ. ಸಂತೋಷ್ ಕುಮಾರ್ ಮಾತನಾಡಿ 1985ರಲ್ಲಿ ಬೆಂಗಳೂರಿಗೆ ಬಂದ ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿಗೆ ಬೆಂಗಳೂರು ಮತ್ತು ಕರ್ನಾಟಕ ಮನೆಯಾಗಿದೆ. ರಾಜ್ಯ ಕೋವಿಡ್ ಸಾಂಕ್ರಾಮಿಕ ರೋಗ ಎದುರಿಸುತ್ತಿರುವಾಗ ನಮ್ಮ ಕಂಪನಿಯು ನೆರವಾಗಲು ಇದೊಂದು ಸಣ್ಣ ಪ್ರಯತ್ನ ಎಂದು ತಿಳಿಸಿದರು. ಈ ಅವಕಾಶವನ್ನು ನೀಡಿದ ಮುಖ್ಯಮಂತ್ರಿಗಳಿಗೆ ಮತ್ತು ಸರ್ಕಾರಕ್ಕೆ ಕೃತ್ಞನತೆಯನ್ನು ಸಲ್ಲಿಸಿದರು.
ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನೀಲ್ ಕುಮಾರ್ ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿಯ ಸಕ್ರಿಯ ಸಹಕಾರಕ್ಕೆ ಧನ್ಯವಾದಗಳನ್ನು ಸಲ್ಲಿ, ಈ ಉಪಕ್ರಮ ಐ.ಸಿ.ಯು ಹಾಸಿಗೆಗಳ ಲಭ್ಯತೆಯನ್ನು ಹೆಚ್ಚಿಸುವ ಜೊತೆಗೆ ಕೋವಿಡ್ ಸೋಂಕಿತರಿಗೆ ಸಮಯೋಚಿತ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಎಂದು ತಿಳಿಸಿದರು.
ಕಂಪನಿಯ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಉಪಕ್ರಮದ ಭಾಗವಾಗಿ (ಸಿಎಸ್‍ಆರ್) ಈ 86 ಐ.ಸಿ.ಯು ಹಾಸಿಗೆಗಳನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಯಲ್ಲಿ (ಆರ್.ಜಿ.ಐ.ಸಿ.ಡಿ) ಸ್ಥಾಪಿಸಲಾಗುತ್ತಿದ್ದು, 3-4 ವಾರಗಳಲ್ಲಿ ಸಿದ್ದವಾಗಲಿದೆ. ಇದೇ ಏಪ್ರಿಲ್ 30 ರಂದು ಮುಖ್ಯಮಂತ್ರಿಗಳು 8 ಬಿ.ಬಿ.ಎಂ.ಪಿ ವಲಯಗಳಲ್ಲಿ ತಲಾ 500 ಐ.ಸಿ.ಯು ಹಾಸಿಗೆಗಳನ್ನು ಸ್ಥಾಪಿಸಲು ನೋಡಲ್ ಅಧಿಕಾರಿಯನ್ನಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ.ಎಸ್. ಹರ್ಷ, ಐ.ಪಿ.ಎಸ್ ಅವರನ್ನು ನೇಮಕ ಮಾಡಿದ್ದರು. ಇದಕ್ಕೆ ಪೂರಕವಾಗಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿಯ ವತಿಯಿಂದ ಈ ಸೌಲಭ್ಯ ಸರ್ಕಾರಕ್ಕೆ ನೀಡಲಾಗುತ್ತಿದೆ.
ನಿಯೋಗದಲ್ಲಿ ಟಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿಯ ಅಧ್ಯಕ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್, ಕಾರ್ಪೊರೇಟ್ ವ್ಯವಹಾರಗಳ ನಿರ್ದೇಶಕ ರಾಜೇಶ್ ಖುಷ್, ಕಾನೂನು ನಿರ್ದೇಶಕ (ಏಷ್ಯಾ)ಗೌರವ್ ಜಬುಲೀ, ಹಣಕಾಸು ಮತ್ತು ಕಾರ್ಯಾಚರಣೆ ನಿರ್ದೇಶಕ ಶೆತುಲ್ ಠಕ್ರಾರ್, ವೈಧ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನೀಲ್ ಕುಮಾರ್ ಮತ್ತು ನೋಡಲ್ ಅಧಿಕಾರಿ ಡಾ. ಪಿ.ಎಸ್. ಹರ್ಷ ಉಪಸ್ಥಿತರಿದ್ದರು.
ಈ ಕೋವಿಡ್ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಲು ಉತ್ಸುಕರಾಗಿರುವ ಖಾಸಗಿ ಉದ್ಯಮ ವಲಯ nodalicubbmp@gmail.com ಈ ಇ-ಮೇಲ್ ವಿಳಾಸದಲ್ಲಿ ಸಕಾರದ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ನೋಡಲ್ ಅಧಿಕಾರಿ ಡಾ. ಪಿ.ಎಸ್. ಹರ್ಷ ತಿಳಿಸಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…