ಕಲಬುರಗಿ: ಕೊರೊನಾ ಮಹಾಮಾರಿ ಎರಡನೇ ಅಲೆ ಜೀವಗಳನ್ನು ಬಲಿ ಪಡೆಯುತ್ತಿದ್ದು, ಇಂತಹ ಸ್ಥಿತಿಯಲ್ಲಿ ರೋಗಿಗಳ ಸಿಬ್ಬಂದಿಗಳು ಭಾವುಕರಾಗಿ ಆರೋಗ್ಯ ಕಾರ್ಯಾಕರ್ತರು ಮತ್ತು ವೈದ್ಯರ ಮೇಲೆ ಹಲ್ಲೆ ನಡೆಸುತ್ತಿರುವ ಘಟನೆಗಳು ರಾಜ್ಯದಲ್ಲಿ ಕಂಡು ಬರುತ್ತಿದೆ.
ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ರಕ್ಷಣೆ ಇಲ್ಲದಂತಾಗಿದ್ದು, ಕೂಡಲೆ ಸರಾಕರ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ವೈದ್ಯಕೀಯ ಮತ್ತು ದಂತ ವೈದ್ಯಕೀಯ ವೇದಿಕೆ ಹಾಗೂ ವೈಟ್ ಸ್ಪಾರ್ಕ್ಸ್ ಜಿಲ್ಲಾ ಸಂಚಾಲಕರು ಹಣಮಂತ ಎಸ್.ಎಚ್ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಇಡೀ ದೇಶದಾದ್ಯಂತ ಕೊರೋನಾ ಸಾಂಕ್ರಾಮಿಕವನ್ನು ತಡೆಗಟ್ಟಲು ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಗಲು ರಾತ್ರಿಯೆನ್ನದೇ ದುಡಿಯುತ್ತಿರುವ ವೈದ್ಯರು ಹಾಗೂ ಇನ್ನಿತರ ಸಿಬ್ಬಂದಿ ವರ್ಗದವರ ಕೆಲಸವನ್ನು ನಾವು ಅಲ್ಲಗಳೆಯಲು ಸಾಧ್ಯವಿಲ್ಲ.
ಇತ್ತೀಚಿಗೆ ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರ ಮೇಲೆ, ರೋಗಿಯನ್ನು ಕಳೆದುಕೊಂಡ ಕುಟುಂಬದವರು ಹಲ್ಲೆ ನಡೆಸಿದರು. ಇದೇ ರೀತಿಯಾದ ಘಟನೆ ಕೆಲವು ದಿನಗಳ ಹಿಂದೆ ಮಂಡ್ಯ ಹಾಗೂ ಗುಲ್ಬರ್ಗಾ ಸರ್ಕಾರಿ ಆಸ್ಪತ್ರೆಯಲ್ಲಿಯೂ ಸಹ ಜರುಗುತ್ತಿದೆ.
ದೇಶದಾದ್ಯಂತ ಎರಡನೆ ಅಲೆಯು ತೀವ್ರ ಸ್ವರೂಪದಲ್ಲಿ ಬಂದೊದಗುತ್ತದೆಂಬ ಮಾಹಿತಿಯನ್ನು ತಜ್ಞರು ಕೇಂದ್ರ ಸರ್ಕಾರಕ್ಕೆ ಈ ಮುಂಚೆಯೇ ತಿಳಿಸಿದ್ದರು ಸಹ, ಇದನ್ನು ಘಣನೆಗೆ ತೆಗೆದುಕೊಳ್ಳದರ ಪರಿಣಾಮ ಇಂದು ಆಸ್ಪತ್ರೆಗಳಲ್ಲಿ ವೈದ್ಯರುಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶ್ವ ಸಂಸ್ಥೆಯ ಸೂಚನೆಯ ಪ್ರಕಾರ ೧:೧೦೦೦ ಪ್ರಾರದಲ್ಲಿ ವೈದ್ಯ ಹಾಗೂ ರೋಗಿಯ ಅನುಪಾತವಿರಬೇಕು.
ಆದರೆ, ನಮ್ಮಲ್ಲಿ ೧:೧೪೫೬ ಅನುಪಾತದಲ್ಲಿದೆ. ಅಲ್ಲದೇ, ನೂರಾರು ಸಂಖ್ಯೆಯಲ್ಲಿ ವೈದ್ಯರು ಸೋಂಕಿತರನ್ನು ಶೂಶ್ರೂಷೆ ಮಾಡುವಾಗ ಕೊರೋನಾ ರೋಗಕ್ಕೆ ಬಲಿಯಾಗಿದ್ದಾರೆ. ಅವರ ಸಾವಿರ ಸಂಖ್ಯೆಯು ಸಹ ಸರ್ಕಾರದ ಬಳಿ ಸಲ್ಲದು. ಆಸ್ಪತ್ರೆಗಳಲ್ಲಿ ಬೆಡ್, ಐಸಿಯು, ಆಕ್ಸಿಜನ್ ಸಿಲಿಂಡರ್‌ಗಳು ಸಿಗದೆ ಸಾವಿರಾರು ಸಂಖ್ಯೆಯಲ್ಲಿ ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಸರ್ಕಾರದ ಬೇಜವಾಬ್ದಾರಿತನವೇ ಕಾರಣ.
ಈ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಂತಹ ವಿಪತ್ತಿನ ಸಂದರ್ಭದಲ್ಲಿ ವೈದ್ಯರು ಮತ್ತು ಆರೋಗ್ಯ ಕಾರ್ಯಾಕರ್ತರಾದ ನರ್ಸ್ ಮತ್ತು ಇತ್ತರ ಸಿಬ್ಬಂದಿಗಳು ಸಿಗುವುದು ಕಷ್ಟಕರವಾಗಿದೆ. ವಿಪತ್ತಿನ ಸಂದರ್ಭದಲ್ಲಿ ಕಾರ್ಯಾನಿರ್ವಹಿಸುತ್ತಿರುವ ಸಿಬ್ಬಂದಿಗಳ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿ ಅವರ ಜೀವಕ್ಕೆ ಅಪಾಯ ಉಂಟು ಮಾಡುವಂತಹ ನಡೆಸಬಾರದು ಎಂದು ಅವರು ಮನವಿ ಮಾಡಿ, ಸರಕಾರ ಇಂತಹ ಘಟನೆಗಳು ನಡೆಯದಂತೆ ಮುನ್ನೆಚರಿಕೆ ಕ್ರಮಕೈಗೊಂಡು ಆರೋಗ್ಯ ಕಾರ್ಯಾಕರ್ತರಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕೆಂದು ಸಂಘಟನೆ ಸದಸ್ಯರಾದ ವಿಶಾಲ ದೋಡ್ಡಮನಿ ಮನವಿ ಮಾಡಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…