ಕಲಬುರಗಿ: ಒಂಬತ್ತು ತಿಂಗಳು ಹೊತ್ತು, ಹೆತ್ತ, ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಹಾಗೂ ಪೋಷಿಸುವ ತಾಯಿಗೆ ಸಮಾನವಾದ ವ್ಯಕ್ತಿ ಮತ್ತೊಬ್ಬರಿಲ್ಲ. ತಾಯಿಯ ಎನ್ನುವುದು ಬರೀ ಹೆಣ್ಣನ್ನು ಕುರಿತು ಹೇಳುವುದಲ್ಲ. ತಾಯಿಗೆ ಭೂಮಿಗೆ ಹೋಲಿಸಲಾಗುತ್ತದೆ. ಅಂದರೆ ಕಷ್ಟಗಳನ್ನು ಅನುಭವಿಸಿ, ತಾಳ್ಮೆಯಿಂದ ಇರುತ್ತಾಳೆ ಎಂಬುದಾಗಿದೆ. ಕೌಟುಂಬಿಕ ನಿರ್ವಹಣೆಯಲ್ಲಿ ತಾಯಿಯ ಪಾತ್ರ ಅಮೋಘವಾಗಿದೆಯೆಂದು ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಹೇಳಿದರು.
ವಿಶ್ವ ಅಮ್ಮಂದಿರ ದಿನಾಚರಣೆ ಪ್ರಯುಕ್ತ, ’ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ನಗರದ ರಾಮತೀರ್ಥ ದೇವಸ್ಥಾನದ ಸಮೀಪದಲ್ಲಿರುವ ಕೊಳಗೇರಿ ಪ್ರದೇಶದ ಅಲೆಮಾರಿ ತಾಯಂದಿರಿಗೆ ಭಾನುವಾರ ಹಣ್ಣುಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.
ತಾಯಿಯು ಪ್ರೀತಿ, ಕರುಣೆ, ಮಾನವೀಯತೆಯನ್ನು ಉಳಿಸಿ, ಬೆಳೆಸುವ ಮಹಾನ ವ್ಯಕ್ತಿಯಾಗಿದ್ದಾಳೆ. ಎಲ್ಲರನ್ನು ಒಂದೂಗೂಡಿಸುವ ಶಕ್ತಿ ಆಕೆಯಲ್ಲಿದೆ. ದೇಶ, ನದಿ, ಪರಿಸರಕ್ಕೆ ತಾಯಿಯ ಸ್ವರೂಪದ ಹೆಸರನ್ನಿಟ್ಟು ಕರೆಯುವುದು ಆಕೆಯ ಮಹತ್ವವನ್ನು ಸಾರುತ್ತದೆ. ’ತಾಯಿಯೇ ಮೊದಲು ಗುರು’ ಎಂಬ ಮಾತು ಮಕ್ಕಳನ್ನು, ಮಹಾನ ವ್ಯಕ್ತಿಯನ್ನಾಗಿಸುವಲ್ಲಿ ಆಕೆಯ ಔಚಿತ್ಯವನ್ನು ತೋರಿಸುತ್ತದೆಯೆಂದು ನುಡಿದರು.
ಸಮಾಜ ಸೇವಕ ಎಸ್.ಎಸ್.ಪಾಟೀಲ ಬಡದಾಳ ಮಾತನಾಡಿ, ವರ್ಣಿಸಲು ಅಸಾಧ್ಯವಾದ ತಾಯಿಯನ್ನು ಪ್ರಸ್ತುತ ದಿನಗಳಲ್ಲಿ ಆಕೆಯ ಮಕ್ಕಳು ಸಮಾಜ ನಡೆಸುಕೊಳ್ಳುತ್ತಿರುವ ರೀತಿಯನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾಗುತ್ತದೆ. ಇಡಿ ತನ್ನ ಜೀವನ ಸವೆಸಿ, ಮಕ್ಕಳನ್ನು ದೊಡ್ಡವರನ್ನಾಗಿ ಮಾಡಿದ ತಾಯಿಯನ್ನು, ಆಕೆಯ ಇಳಿವಯಸ್ಸಿನಲ್ಲಿ ಸರಿಯಾಗಿ ನೋಡಿಕೊಳ್ಳದೆ, ವೃದ್ಧಾಶ್ರಮಕ್ಕೆ ಸೇರಿಸುವುದು ಅತ್ಯಂತ ನೀಚ, ಜವಾಬ್ದಾರಿಯುತ ಸಮಾಜ ತಲೆ ತಗ್ಗಿಸಬೇಕಾದ ವಿಷಯವಾಗಿದೆ. ಇದಕ್ಕೆ ಆಸ್ಪದ ನೀಡದೆ ಪ್ರತಿಯೊಬ್ಬರು ತಾಯಿಗೆ ಉತ್ತಮವಾಗಿ ಆರೈಕೆ ಮಾಡಬೇಕು, ಪೂಜ್ಯನೀಯ ಸ್ಥಾನವನ್ನು ನೀಡಿ ಗೌರವಿಸಬೇಕೆಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ನರಸಪ್ಪ ಬಿರಾದಾರ ದೇಗಾಂವ, ದೇವೇಂದ್ರಪ್ಪ ಗಣಮುಖಿ, ಅಣ್ಣಾರಾಯ ಎಚ್.ಮಂಗಾಣೆ, ಪ್ರಕಾಶ ಸರಸಂಬಿ ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…