ಲಾಕಡೌನ್ ಪಾಲಿಸಲು ಶಾಸಕ ಗುತ್ತೇದಾರ ಮನವಿ

0
24

ಆಳಂದ: ಮೇ ೧೦ ರಿಂದ ಆರಂಭವಾಗಿರುವ ಲಾಕಡೌನ್‌ನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಿ ಆಡಳಿತದ ಜೊತೆ ಸಹಕರಿಸಬೇಕೆಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಮನವಿ ಮಾಡಿಕೊಂಡಿದ್ದಾರೆ.

ಕೋರೋನಾ ಎರಡನೇ ಅಲೆ ನಿಯಂತ್ರಿಸಲು ಲಾಕಡೌನ್ ಅನಿವಾರ್ಯ ಎಂದು ಮನಗಂಡು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಸಾರ್ವಜನಿಕರು ವಿನಾಕಾರಣ ಓಡಾಡಬಾರದು ಸಾಧ್ಯವಾದಷ್ಟು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಮನೆಯಲ್ಲಿಯೇ ಇರುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

Contact Your\'s Advertisement; 9902492681

ಇಂತಹ ಕಷ್ಟದ ಸಂದರ್ಭದಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕೋರೋನಾ ಸಮಯದಲ್ಲಿ ಮುಖ್ಯ ವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಪಾತ್ರ ವಿಶೇಷವಾದುದ್ದು. ಎರಡು ಇಲಾಖೆಯ ಸಿಬ್ಬಂದಿಗಳೊಂದಿಗೆ ಜನತೆ ಸಹಕರಿಸುವುದು ಮುಖ್ಯವಾಗಿದೆ ಎಂದು ತಿಳಿಸಿದ್ದಸಾರೆ.

ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಗ್ರಾಮೀಣ ಮಟ್ಟದಲ್ಲಿ ಕೋರೋನಾ ನಿಯಂತ್ರಿಸುವಲ್ಲಿ ಶ್ರಮಿಸುತ್ತಿದ್ದಾರೆ ಅವರ ಆದೇಶಗಳನ್ನು ಸಾರ್ವಜನಿಕರು ಪಾಲಿಸಿ ಅವರಿಗೆ ಸಹಕಾರ ನೀಡಬೇಕು ಇದರಿಂದ ವೈರಸ್ ಹರಡುವುದನ್ನು ನಿಯಂತ್ರಿಸಬಹುದಾಗಿದೆ. ಸರ್ಕಾರದ ನಿಯಮಾವಳಿಯಂತೆ ಅಂತ್ಯ ಸಂಸ್ಕಾರದಲ್ಲಿ ೫ ಜನಕ್ಕಿಂತ ಹೆಚ್ಚಿನ ಜನ ಸೇರಬಾರದು, ಮದುವೆ ಕಾರ್ಯಕ್ರಮದಲ್ಲಿಯೂ ಕಡಿಮೆ ಜನ ಇರುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಗ್ರಾಮ ಲೇಖಪಾಲಕರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಜೆಸ್ಕಾಂ,  ಸೇರಿದಂತೆ ಆರೋಗ್ಯದ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ಎಲ್ಲ ರೀತಿಯ ಅಧಿಕಾರಿಗಳು ವಿವಿಧ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ, ಕೇಂದ್ರಸ್ಥಾನದಲ್ಲಿದ್ದುಕೊಂಡು ಸಾರ್ವಜನಿಕರಿಂದ ದೂರು ಬರದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here