ಕಲಬುರಗಿ: ಕೇಂದ್ರ ಸರಕಾರ ಬ್ಯಾಂಕ್ ನೌಕರರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿ, ಲಸಿಕಾಕರಣಕ್ಕೆ ಘೋಷಣೆ ಮಾಡಿದೆ. ರಾಜ್ಯ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಬ್ಯಾಂಕ್ ನೌಕರರನ್ನು ಅದ್ಯತೆ ಮೇರೆಗೆ ಲಸಿಕಾಕರಣ ನೀಡಬಾರದೆಂದು ಆದೇಶ ಹೋರಡಿಸಿರುವ ಬ್ಯಾಂಕ್ ಸಿಬ್ಬಂದಿಗಳಿ ಸೇವೆಯನ್ನು ಅವಮಾನಿಸಿದ್ದಾರೆಂದು ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾಣ ಕಾರ್ಯಾದರ್ಶಿ ಎ.ಆರ್. ಚಂದ್ರಮೋಹನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರ ಸರಕಾರ ಗೃಹ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ ಬ್ಯಾಂಕ್ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ವಿತ್ತ ಸಚಿವಾಯವು ಮಾ. 22 ಎಲ್ಲ ಬ್ಯಾಂಕ್ಯ ಮುಖ್ಯಸ್ಥರಿಗೆ ಮತ್ತು ಆರ್.ಬಿ.ಐ ಕಳಿಸಿದೆ. ಈ ಪತ್ರಕ್ಕೆ ಬೆಲೆ ನೀಡದೇ ನೌಕರರನ್ನು ಅವಮಾನಿಸಿದೆ.
ಬ್ಯಾಂಕ್ ನೌಕರರು ತನ್ನ ಪ್ರಾಣವನ್ನು ಪಣಕಿಟ್ಟು ಆಗತ್ಯ ಸೇವೆ ನೀಡುತ್ತ ದೇಶದ ಆರ್ಥಿಕ ಪರಿಸ್ಥಿತಿಯನ್ನು ಜೀವಂತವಾಗಿಡಲು ಹಾಗೂ ಜನತೆಗೆ ದೊರೆಯ ಬೇಕಾದ ಅಗತ್ಯ ಹಣದ ಸರಬರಾಜು ಮಾಡುವಲ್ಲಿ ಬಹುದೊಡ್ಡ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹಲವು ನೌಕರರು ಕೋವಿಡ್ ಗೆ ಬಲಿಯಾಗಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಆದರು ಸಹ ನಮ್ಮ ಸೇವೆಯನ್ನು ನಿರಂತರ ನೀಡುತ್ತಿದ್ದೇವೆ.
ರಾಜ್ಯ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಕೇಂದ್ರ ಸರಕಾರ ಗೃಹ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ ಆದೇಶದಂತೆ ಬ್ಯಾಂಕ್ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಲಸಿಕಾಕರಣ ನೀಡಬೇಕೆಂದು ಆಗ್ರಹಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…