ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ACC ಯೂನಿಯನ್ ನಾಯಕರು ಹಾಗೂ ಹಿರಿಯ ದಲಿತ ಮುಖಂಡರಾದ ಶಿವಾಜಿ ಕೋಮ್ಟೆ ಯವರು (ಮೋಹನಲಾಲ ಕೋಮ್ಟೆ ಯವರ ಸಹೋದರ) ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖವನ್ನುಂಟು ಮಾಡಿದೆ ಎಂದು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಕಂಬನಿ ಮಿಡಿದಿದ್ದಾರೆ.
ಶಿವಾಜಿ ಕೋಮ್ಟೆ ಅಣ್ಣ ನವರ ಅಕಾಲಿಕ ಅಗಲಿಕೆಯಿಂದ ಚಿತ್ತಾಪುರ ತಾಲೂಕಿನಲ್ಲಿ ಮತ್ತು ಜಿಲ್ಲೆಯಾದ್ಯಂತ ಕಾರ್ಮಿಕ ಹಾಗೂ ದಲಿತ ವರ್ಗಗಳಲ್ಲಿ ಶೂನ್ಯ ಆವರಿಸಿದಂತಾಗಿದೆ. ಶ್ರೀಯತರು ದಲಿತ ಮತ್ತು ಬಡವರ ಪರವಾಗಿ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡುತ್ತಿದ್ದರು. ಹೋರಾಟ ಮನೋಭಾವದ ಚಿಂತನಶೀಲ ವ್ಯಕ್ತಿತ್ವ ಉಳ್ಳವರಾಗಿದ್ದರು.
ಅವರನ್ನು ಕಳೆದುಕೊಂಡಿರುವುದು ಕಲಬುರಗಿ ಜಿಲ್ಲೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…