ಡಿಶ್ಚಾರ್ಜ್ ದಿನವೇ ಉಸಿರು ನಿಲ್ಲಿಸಿದ ಡೆಡ್ಲಿ ವೈರಸ್: ಎಸಿಸಿ ಕಾರ್ಮಿಕ ಸಂಘದ ಅಧ್ಯಕ್ಷ ಕೋಮಟೆ ಸೋಂಕಿಗೆ ಬಲಿ

ವಾಡಿ: ಪಟ್ಟಣದ ಎಸಿಸಿ ಸಿಮೆಂಟ್ ಕಾರ್ಖಾನೆಯ ಕಾರ್ಮಿಕ ಸಂಘ (ಎಐಟಿಯುಸಿ)ದ ಅಧ್ಯಕ್ಚ ಶಿವಾಜಿ ಕೋಮಟೆ, ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಸೋಂಕು ದೃಢಪಟ್ಟು ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಕಲಬುರಗಿ ಇಎಸ್‌ಐಸಿ ಆಸ್ಪತ್ರೆಗೆ ದಾಖಲಿಸಿ ಕಳೆದ ಹತ್ತು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.

ಆರೋಗ್ಯವಾಗಿದ್ದ ಶಿವಾಜಿ ಕೊಮಟೆ ಏಕಾಏಕಿ ಅನಾರೋಗ್ಯಕ್ಕೀಡಾಗಿ ಹಾಸಿಗೆ ಹಿಡಿದಿದ್ದರು. ಜ್ವರ ಮತ್ತು ಉಸಿರುಗಟ್ಟಿದ ಲಕ್ಷಣಗಳು ಕಾಣಿಸಿಕೊಂಡ ಪರಿಣಾಮ ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಡ್ ಸಿಗದೆ ಕೆಲಹೊತ್ತು ಪರದಾಡಿದ್ದಾರೆ. ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಸಂಪರ್ಕಿಸಿದ ಬಳಿಕ ಇಎಸ್‌ಐಸಿಯಲ್ಲಿ ಆಕ್ಸಿಜನ್ ಸಹಿತ ಬೆಡ್ ವ್ಯವಸ್ಥೆಯಾಗಿತ್ತು. ಚಿಕಿತ್ಸೆಯಿಂದ ಚೇತರಿಸಿಕೊಂಡು ಸೋಮವಾರ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಲು ಸಿದ್ಧತೆಗಳು ಮಾಡಿಕೊಳ್ಳಲಾಗಿತ್ತು ಎನ್ನಲಾಗಿದ್ದು, ಏಕಾಏಕಿ ಮದುಮೇಹ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಪರಿಣಾಮ ಕಾರ್ಮಿಕ ನಾಯಕ ಶಿವಾಜಿ ಕೋಮಟೆ ಅವರು ಕೋಮಾ ಸ್ಥಿತಿಗೆ ತಲುಪಿದ್ದರು. ವೈದ್ಯರು ಅವರಿಗೆ ಮತ್ತೆ ಚಿಕಿತ್ಸೆ ಮುಂದುವರೆಸಿದ್ದಾರೆ. ಅನಾರೋಗ್ಯದಿಂದ ಚೇತರಿಸಿಕೊಂಡು ಮನೆಗೆ ಮರಳುತ್ತಾರೆ ಎಂಬ ಪಾಜಿಟೀವ್ ಸುದ್ದಿ ಹರಿದಾಡುತ್ತಿದ್ದಂತೆ, ಕ್ರೂರಿ ಕೊರೊನಾ ಕಾರ್ಮಿಕ ನಾಯಕನ ಉಸಿರನ್ನೇ ನಿಲ್ಲಿಸಿಬಿಟ್ಟಿತು.

ಮೂರು ಬಾರಿ ಕಾರ್ಮಿಕ ಸಂಘದ ಅಧ್ಯಕ್ಷರಾಗಿ ಚುನಾಯಿತರಾಗುವ ಮೂಲಕ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಸರಳ ವ್ಯಕ್ತಿತ್ವದ ಶಿವಾಜಿ ಕೋಮಟೆ ಅವಿವಾಹಿತರಾಗಿದ್ದರು. ಸಹೋದರ, ಕಾಂಗ್ರೆಸ್ ಹಿರಿಯ ನಾಯಕ ಟೋಪಣ್ಣ ಕೋಮಟೆ ಹಾಗೂ ೯೦ ವರ್ಷದ ತಾಯಿಯನ್ನು ಮತ್ತು ತಂಗಿಯನ್ನು ಅವರು ಕಳೆದುಕೊಂಡಿದ್ದಾರೆ. ಸೋಮವಾರ ಮದ್ಯಾಹ್ನ ನಗರದ ಅವರ ಸ್ವಂತ ಜಮೀನಿನಲ್ಲಿ ಬೌದ್ಧ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರೀಯೆ ನೆರವೇರಿಸಲಾಯಿತು.

ಸಂತಾಪ: ಶಾಸಕ ಪ್ರಿಯಾಂಕ್ ಖರ್ಗೆ, ಎಪಿಎಂಸಿ ಮಾಜಿ ಅಧ್ಯಕ್ಷ ಶಂಕ್ರಯ್ಯಸ್ವಾಮಿ ಮದರಿ, ಕಾರ್ಮಿಕ ಸಂಘದ ಉಪಾಧ್ಯಕ್ಷ ಮಹ್ಮದ್ ಮನ್ಸೂರ್ ಅಲಿ, ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ, ಮಹರ್ಷಿ ವಾಲ್ಮೀಕ ಸಮಾಜದ ಅಧ್ಯಕ್ಷ ಭೀಮರಾವ ದೊರೆ, ವೀರಶೈವ ಸಮಾಜದ ಅಧ್ಯಕ್ಷ ಸಿದ್ದಣ್ಣ ಕಲಶೆಟ್ಟಿ, ಕೋಲಿ ಸಮಾಜದ ಅಧ್ಯಕ್ಷ ನಾಗೇಂದ್ರ ಜೈಗಂಗಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ, ಮುಖಂಡರಾದ ಚಂದ್ರಸೇನ ಮೇನಗಾರ, ಶರಣು ನಾಟೀಕಾರ, ವಿಶಾಲ ನಂದೂರಕರ, ಸೂರ್ಯಕಾಂತ ರದ್ದೇವಾಡಿ, ರಾಜು ಮುಕ್ಕಣ್ಣ, ದೇವಿಂದ್ರ ಕರದಳ್ಳಿ, ಅನೀಲ ಶಿಬೋನೋರ ಹಾಗೂ ಮತ್ತಿತರರು ಶಿವಾಜಿ ಕೋಮಟೆ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420