ಬೆಂಗಳೂರು: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಹಾಗೂ ಮಾಧ್ಯಮಗಳಲ್ಲಿರುವ ಸಿಬ್ಬಂದಿಗಳನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿರುತ್ತಾರೆ.
ಅದರಂತೆ ಆರೋಗ್ಯ ಇಲಾಖೆಗೆ ಸೂಕ್ತ ವ್ಯವಸ್ಥೆಯನ್ನು ಮಾಡಲು ಕೋರಲಾಗಿದ್ದು, ಈ ಲಸಿಕಾ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಪಟ್ಟಿಯಲ್ಲಿ ಸೇರಿರುವ ಪತ್ರಿಕೆಗಳು ಹಾಗೂ ವಿದ್ಯುನ್ಮಾನ ಚಾನಲ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಹಾಗೂ ಸಿಬ್ಬಂದಿಗಳ ಮಾಹಿತಿಯನ್ನು ಸಂಗ್ರಹಿಸುತ್ತಿದೆ.
ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರು ತಮ್ಮ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಲಸಿಕೆ ಪಡೆಯಲು ಇಚ್ಛಿಸುವ ಪತ್ರಕರ್ತರ ಹಾಗೂ ಸಿಬ್ಬಂದಿಗಳ ಹೆಸರು, ಹುದ್ದೆ, ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ಸಹಿತ ವಿವರಗಳ ಪಟ್ಟಿಯನ್ನು ಹೊಂದಿರುವ ಅಧಿಕೃತ ಪತ್ರವನ್ನು ಇಲಾಖೆಯ ಕೇಂದ್ರ ಕಚೇರಿಗೆ ಮುದ್ದಾಂ ತಲುಪಿಸಲು ಹಾಗೂ ಇ-ಮೇಲ್ ವಿಳಾಸ journalistvaccination@gmail.com ಗೆ (word file) ಕಳುಹಿಸಿ ಕೊಡಲು ಕೋರಿದೆ. ಬೆಂಗಳೂರು ನಗರದ ವಿವಿಧ ಜ಼ೋನ್ ಗಳಲ್ಲಿ (ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಕೇಂದ್ರ ಹಾಗೂ ಆನೇಕಲ್) ಲಸಿಕಾ ಕೇಂದ್ರವನ್ನು ನಿಗದಿ ಪಡಿಸಲಾಗುವುದು. ಹಾಗಾಗಿ ತಮ್ಮ ಸಂಸ್ಥೆ ಯಾವ ಜ಼ೋನ್ ಗೆ ಒಳಪಡುತ್ತದೆ ಎಂಬುದನ್ನೂ ತಪ್ಪದೇ ಪತ್ರದಲ್ಲಿ ತಿಳಿಸುವುದು.
ಈ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ಕಳುಹಿಸಿ ಅವರು ನಿಗದಿಪಡಿಸಿದ ಕೇಂದ್ರದಲ್ಲಿ ಲಸಿಕೆ ಪಡೆಯಲು ದಿನಾಂಕ ಹಾಗೂ ಸಮಯ ತಿಳಿಸಲಾಗುವುದು. ಅದರಂತೆ, ನಿಗದಿತ ದಿನದಂದು ತಮ್ಮ ಸಂಸ್ಥೆಯ ಮುಖ್ಯಸ್ಥರಿಂದ ನಿಗದಿತ ದೃಢೀಕರಣ ಪತ್ರ ಪಡೆದು, ಸಂಸ್ಥೆಯ ಗುರುತಿನ ಚೀಟಿ ಹಾಗೂ ಆಧಾರ್ ಸಂಖ್ಯೆಯೊಂದಿಗೆ ತಾವೇ ಖುದ್ದು www.cowin.gov.in ಪೋರ್ಟಲ್ ನಲ್ಲಿ ಅಥವಾ ಲಸಿಕಾ ಕೇಂದ್ರದಲ್ಲಿ ನೋಂದಾಯಿಸಿಕೊಂಡು ತಪ್ಪದೇ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಲು ಮಾನ್ಯ ಆಯುಕ್ತರಿಂದ ನಿರ್ದೇಶಿತಳಾಗಿದ್ದೇನೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…