ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದು, ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಎಲ್ಲಾ ವಯೋಮಾನದ ಪತ್ರಕರ್ತರಿಗೆ ಉಚಿತವಾಗಿ ವ್ಯಾಕ್ಸಿನ್ ನೀಡಬೇಕೆಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪತ್ರಕರ್ತರಿಗೆ ಉಚಿತ ಕೋವಿಡ್ ಲಸಿಕೆ ನೀಡಲು ಸಿಎಂ ಸೂಚನೆ
ಸಿಎಂ ಆದೇಶ ಮಾಡಿದ್ದರೂ, ಕೆಲವು ಜಿಲ್ಲೆಯಲ್ಲಿ ಸಮಸ್ಯೆ ಮಾಡುತ್ತಿರುವ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷ ಶಿವಾನಂದ ತಗಡೂರು ಅವರು ಸಚಿವರನ್ನು ಭೇಟಿ ಮಾಡಿ ಗಮನಕ್ಕೆ ತಂದ ಕೂಡಲೇ, ಹಿರಿಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲರಿಗೂ ವ್ಯಾಕ್ಸಿನೇಷನ್ ಮಾಡಿಸುವುದು ನಮ್ಮ ಜವಾಬ್ದಾರಿ. ಆ ಕೆಲಸವನ್ನು ಮಾಡುವುದಾಗಿ ಸಚಿವರು ತಿಳಿಸಿದ್ದಾರೆ. ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಅಭಿನಂದನೆ: ಸಮಸ್ಯೆ ವಿವರವಾಗಿ ಆಲಿಸಿ, ಕೂಡಲೇ ಸ್ಪಂದಿಸಿ, ಪತ್ರಕರ್ತರಿಗೆ ವ್ಯಾಕ್ಸಿನೇಷನ್ ಗೆ ಸೂಚನೆ ನೀಡಿರುವ ಸಚಿವ ಡಾ.ಸುಧಾಕರ್ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ ಸಲ್ಲಿಸಿದೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…