ಬಿಸಿ ಬಿಸಿ ಸುದ್ದಿ

ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲಿಸೋಣ: ಶಿವಶರಣಪ್ಪ ಗೌಡ

ಚಿತ್ತಾಪುರ: ರಾಜ್ಯಾದ್ಯಂತ ಹಾಗೂ ನಮ್ಮ ಕಲಬುರ್ಗಿಯಲ್ಲಿ ಕೂಡ ಕರೋನಾ ಮಹಾಮಾರಿ ತೀವ್ರವಾಗಿ ಹರಡುತ್ತಿದ್ದು ಎಲ್ಲರೂ ಸರ್ಕಾರ ಹೊರಡಿಸಿರುವ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಪೇಠಶಿರೂರ್ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ಶಿವಶರಣಪ್ಪ ಗೌಡ ಮಾಲಿ ಪಾಟೀಲ್ ಹೇಳಿದರು.

ಪೇಠಶಿರೂರ್ ಗ್ರಾಮದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಣೆ ಮಾಡಿ ಮಾತನಾಡಿದ ಅವರು ಕರೋನಾ ಕಳೆದ ಒಂದು ವರ್ಷದಿಂದ ಜನ ಜೀವನವನ್ನು ಇನ್ನಿಲ್ಲದಂತೆ ಕಾಡುತ್ತಿದೆ.ಮಹಾಮಾರಿ ಕರೋನಾ ವೈರಸ್ 2ನೇ ಅಲೆ ಬಹಳ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನ ಸಾಮಾನ್ಯರೇ ಇದನ್ನು ತಡೆಗಟ್ಟಲು ಜಾಗೃತರಾಗಬೇಕು.ನಮ್ಮ ಆರೋಗ್ಯವನ್ನು ನಾವೇ ಕಾಪಾಡಿಕೊಳ್ಳೋಣ ಎಂದರು.

ಸಾರ್ವಜನಿಕರು ದಯಮಾಡಿ ಮನೆಯಿಂದ ಹೊರಬರದೇ,ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮಾತ್ರ ಸರ್ಕಾರ ಹೊರಡಿಸಿರುವ ನಿಯಮಗಳನ್ನು ಪಾಲಿಸುವ ಮೂಲಕ ಸೋಂಕು ಹರಡುವುದನ್ನು ತಡೆಯೋಣ ಎಂದರು. 18 ವರ್ಷಕ್ಕಿಂತ ಮೇಲ್ಪಟ್ಟವರು ಕರೋನಾ ಲಸಿಕೆ ಪಡೆದು ಮಹಾಮಾರಿ ಕೋವಿಡ್ ವೈರಸ್ ಹರಡುವುದನ್ನು ತಡೆಗಟ್ಟಬೇಕಿದೆ ಎಂದು ಗ್ರಾಮದ ಜನತೆಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ವೆಂಕಟೇಶ್, ನಾಗಪ್ಪ ಪಡಶೆಟ್ಟಿ,ಶರಣಪ್ಪ ಬೆಲ್ಲದ್,ಶರಣಪ್ಪ ಗುಡುರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

45 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago