ಕಲಬುರಗಿ: ಕೊರೊನಾ ಮಹಾಮಾರಿಯ ಕಾರಣದಿಂದ ಸಂಕಷ್ಟಕ್ಕೊಳಗಾಗಿರುವ ಬಡವರು ಮತ್ತು ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ ಈ ಬಾರಿಯ ಬಸವ ಜಯಂತಿಯನ್ನು ಅರ್ಥಪೂರ್ಣ ಮತ್ತು ಸರಳವಾಗಿ ಆಚರಿಸೋಣ ಎಂದು ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷರೂ ಆದ ಶರಣ ಸಾಹಿತಿ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಸಧ್ಯ ಇಡೀ ವಿಶ್ವವೇ ಕಷ್ಟದಲ್ಲಿದೆ. ಹೀಗಾಗಿ, ಇಂದು ಬಸವ ಜಯಂತಿಯ ವಿಜೃಂಭಣೆಯ ಆಚರಣೆ ಸಾಧ್ಯವಿಲ್ಲ. ಹಾಗಾಗಿ, ಎಲ್ಲ ಬಸವಾನುಯಾಯಿಗಳು ಮೇ ೧೪ ರಂದು ತಮ್ಮ ಮನೆಗಳಲ್ಲಿಯೇ ಜಯಂತಿಯನ್ನು ಆಚರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಬಸವ ಜಯಂತಿ ಆಚರಣೆಯನ್ನು ಇನ್ನಷ್ಟು ಅರ್ಥಪೂರ್ಣವಾಗಿಸಲು, ಎಲ್ಲರನ್ನೂ ಸಮಾನವಾಗಿ ಕಾಣುತ್ತಾ, ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುತ್ತಾ, ಹಸಿದವರಿಗೆ ಊಟ ನೀಡುತ್ತಾ ಎಲ್ಲರೂ ಬಸವ ಜಯಂತಿಯನ್ನು ಆಚರಿಸೋಣ. ವಿಶ್ವಗುರು ಬಸವಾದಿ ಶರಣರ ತತ್ವವಾಗಿರುವ ದಾಸೋಃವನ್ನು ಪಾಲಿಸಬೇಕು.
ಇಂದು ಕಷ್ಟದಲ್ಲಿದ್ದವರಿಗೆ ಆಹಾರದ ಕಿಟ್‌ಗಳು ಸೇರಿದಂತೆ ಹಣ್ಣು-ಹಂಪಲುಗಳನ್ನು ನೀಡುವ ಮೂಲಕ ಬಸವ ಜಯಂತಿಯನ್ನು ದಯವೇ ಧರ್ಮದ ಮೂಲವಯ್ಯಾ, ದಯವಿರಬೆಕು ಸಕಲ ಪ್ರಾಣಿಗಳಲ್ಲಿ ಎನ್ನುವ ಹಾಗೇ ವಚನದ ಅರ್ಥ ಸಾರುವ ನಿಟ್ಟಿನಲ್ಲಿ ಆಚರಿಸೋಣ ಎಂದು ತೇಗಲತಿಪ್ಪಿ ಮನವಿ ಮಾಡಿಕೊಂಡಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…