ಬಸವಕಲ್ಯಾಣ: ಬೀದರ್ ಜಿಲ್ಲೆಯ ಬಸವಕಲ್ಯಾಣದ ವಾಡ೯ ನಂ 6 ರ ಛಿಲ್ಲಾ ಗಲ್ಲಿಯಲ್ಲಿ ಒಂದು ಹಳೆಯ ಮಣ್ಣಿನ ಮನೆಯ ಮೇಲ್ಛಾವಣಿ ಕುಸಿದ ಪರಿಣಾಮ ಮುಸ್ಲಿಂ ಸಮುದಾಯದ ಒಂದೇ ಕುಟುಂಬದ 6 ಜನ ಮೃತ ಪಟ್ಟಿರುವ ಘಟನೆ ಸಂಭವಿಸಿದೆ.
ಮನೆಯ ಮುಖ್ಯಸ್ಥ ಶೇಖ ನದಿಮ ಶೇಖ ಯುಸೂಫ (42) ಫರಿದಾಬಾನು ಗಂಡ ಶೇಖ ನದಿಮ (36), ಇವರ ನಾಲ್ಕು ಮಕ್ಕಳಾದ ಶಾಬಾನು 15),ಮೇಹತಾಬ ಬೀ (13), ಫೈಜಾನ ಅಲಿ (5), ಫರಹಾನ ಅಲಿ (3) ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳು.
ಬಸವಕಲ್ಯಾಣ ನಗರ ಸಿ.ಪಿ.ಐ ರವರು ಹಾಗೂ ನಗರ ಠಾಣೆ ಸಿಬ್ಬಂದಿಯವರು ಹಾಗೂ ಸಾವ೯ಜನಿಕರೂ ಕೂಡಿಕೊಂಡು ಮಣ್ಣಿನ ಅಡಿಯಲ್ಲಿ ಸಿಲುಕಿರುವ ಮೃತ ದೇಹಗಳನ್ನು ಹೊರಗಡೆ ತೆಗೆದು ಮುಂದಿನ ಕ್ರಮ ಜರುಗಿಸಿರುತ್ತಾರೆ.
ಘಟನೆ ಸ್ಥಳಕ್ಕೆ ಬಸವಕಲ್ಯಾಣ ಶಾಸಕರಾದ ಬಿ.ನಾರಾಯಣರಾವ್ ಹಾಗೂ ತಹಶೀಲ್ದಾರ ಸಾವಿತ್ರಿ ಸಲಗರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿ ಸರಕಾರದ ಸೌಲಭ್ಯ ಹಾಗೂ ಸಹಕಾರದ ಭರವಸೆ ನೀಡಿದರು.
ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…