ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಪತ್ರಕರ್ತರು, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿ ಯ ಸ್ಥಾನಿಕ ಸಂಪಾದಕರು, ಆತ್ಮೀಯರು ಆಗಿದ್ದಂತಹ ಜಯತೀರ್ಥ ಕಾಗಲಕರ್ ಅವರು ಕೊರೋನಾ ಸೋಂಕಿಗೆ ಬಲಿಯಾಗಿರುವ ವಿಚಾರ ತುಂಬ ದುಃಖ ಉಂಟುಮಾಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು, ಜೇವರ್ಗಿ ಮತಕ್ಷೇತ್ರದ ಶಾಸಕರಾದ ಡಾ. ಅಜಯ್ ಸಿಂಗ್ ಹೇಳಿದ್ದಾರೆ.
ಹೇಳಿಕೆ ನೀಡಿರುವ ಅವರು ಮೂರು ದಶಕದಿಂದ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುತ್ತ ಈಚೆಗಷ್ಟೇ ಅವರು ಸ್ಥಾನಿಕ ಸಂಪಾದಕರ ಹುದ್ದೆಗೆ ಬಡ್ತಿ ಹೊಂದಿದ್ದರು. ತಮ್ಮ ವಿಶಿಷ್ಟ ವರದಿಗಳಿದಾಗಿಯೇ ಜನಮನ ಸೆಳೆಯುತ್ತಿದ್ದ ಅವರು ಅಭಿವೃದ್ಧಿ ವಿಚಾರಗಳನ್ನಿಟ್ಟುಕೊಂಡು ಮಾಡುತ್ತಿದ್ದ ವರದಿಗಳು ಅನೇಕ ಸಾರಿ ಆಡಳಿತದತ್ತ ಚಾಟಿ ಬೀಸುವಂತಿರುತ್ತಿದ್ದವು. ಅವರ ಅಕಾಲಿಕ ನಿಧನ ಈ ಭಾಗದ ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ.
ಸದಾ ನಗು ಮೊಗದವರಾಗಿದ್ದುಕೊಂಡು ಸರಳ, ಸೌಮ್ಯ ಸ್ವಭಾವದವರಾಗಿದ್ದಂತಹ ಕಾಗಲ್ಕರ್ ಅವರ ಅಕಾಲಿಕ ಅಗಲುವಿಕೆ ನಮಗೆ ತುಂಬ ನೋವು ಉಂಟು ಮಾಡಿದೆ. ದೇವರು ಅವರ ಕುಟುಂಬಕ್ಕೆ, ಬಂಧುಗಳಿಗೆ, ಮಿತ್ರರಿಗೆ, ಅಭಿಮಾನಿಗಳಿಗೆ ಅವರ ಅಗಲುವಿಕೆ ನೋವು ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುವೆ ಎಂದು ಡಾ. ಅಜಯ್ ಸಿಂಗ್ ಹೇಳಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…