ಸುರಪುರ: ಕಳೆದ ಶನಿವಾರ ನಡೆದ ಹುಣಸಗಿ ಪಟ್ಟಣದ ಅಪ್ರಾಪ್ತ ಯುವತಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿ ನಂತರ ಯುವತಿ ಸಾವಿಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನ ಮುಖಂಡರು ಒತ್ತಾಯಿಸಿದರು.
ಈ ಕುರಿತು ಗೃಹ ಸಚಿವರಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿ ಮಾತನಾಡಿ,ಅಪ್ರಾಪ್ತ ಯುವತಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಘಟನೆ ಮಾನವ ಸಮಾಜ ತಲೆ ತಗ್ಗಿಸುವಂತಿದೆ.ಇದನ್ನು ಎಬಿವಿಪಿ ಉಗ್ರವಾಗಿ ಖಂಡಿಸುತ್ತದೆ ಮತ್ತು ಘಟನೆಯಲ್ಲಿನ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಯನ್ನು ನೀಡಬೇಕು.ಅಲ್ಲದೆ ಸಂತ್ರಸ್ತ ಕುಟುಂಬಕ್ಕೆ ಸೂಕ್ತವಾದ ಹಾಗು ಆರ್ಥಿಕ ಅನುಗುಣವಾಗಿ ಪರಿಹಾರ ಧನವನ್ನು ನೀಡಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪರಿಷತ್ನ ಕಲಬುರ್ಗಿ ವಿಭಾಗದ ಸಹ ಪ್ರಮುಖ ಡಾ:ಉಪೇಂದ್ರ ನಾಯಕ ಸುಬೇದಾರ,ಜಿಲ್ಲಾ ಸಂಚಾಲಕ ಕ್ಯಾತಪ್ಪ ಮೇದಾ ಮುಖಂಡ ಮಲ್ಲಿಕಾರ್ಜುನ ಸೇರಿದಂತೆ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…