ಬೆಂಗಳೂರು: ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿನ ಸರ್ಕಾರಿ ಕಚೇರಿಗಳಿಗೆ ಸ್ಥಳೀಯ ವೃಂದಗಳಲ್ಲಿನ ವಿವಿಧ ಹುದ್ದೆಗಳಿಗೆ ನೇಮಕಾತಿ ಹೊಂದುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳವರೆಗೆ ಹೈದರಾಬಾದ್ ಕರ್ನಾಟಕ ಪ್ರದೇಶ ಹೊರತು ಪಡಿಸಿ ಬೇರೆಡೆಗೆ ವರ್ಗಾವಣೆ ಮಾಡಬಾರದೆಂದು ಸಕ್ರಮ ಪ್ರಾಧಿಕಾರಿಗಳಿಗೆ ಸರ್ಕಾರ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದೆ.
ಸಮಾಜ ಕಲ್ಯಾಣ ಸಚಿವರೂ ಆದ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕಲಬುರ್ಗಿ ಜಿಲ್ಲೆಯಲ್ಲಿ 76 ಪ್ರಮುಖ ಹುದ್ದೆಗಳು ಖಾಲಿ ಇದ್ದು, ತೀರಾ ಹಿಂದುಳಿದಿರುವ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಅಧಿಕಾರಿಗಳನ್ನು ಅಲ್ಪ ಕಾಲದಲ್ಲಿಯೇ ವರ್ಗಾವಣೆ ಮಾಡುತ್ತಿರುವುದರಿಂದ ಈ ಪ್ರದೇಶದ ಅಭಿವೃದ್ಧಿ ಕುಂಠಿತವಾಗಿದೆ ಎಂದು ತಿಳಿಸಿದ್ದರಲ್ಲದೆ, ಹೈದರಾಬಾದ್ ಪ್ರದೇಶಕ್ಕೆ ವರ್ಗಾವಣೆಗೊಳ್ಳುವ ಅಧಿಕಾರಿಗಳು ನಿಗದಿತ ವೇಳೆಯವರೆಗೂ ಕಡ್ಡಾಯವಾಗಿ ಸೇವೆ ಸಲ್ಲಿಸುವಂತೆ ಸಕ್ರಮ ಪ್ರಾಧಿಕಾರಿಗಳಿಗೆ ಸೂಚಿಸಬೇಕೆಂದು ಕೋರಿದ್ದರು.
ಈ ಹಿನ್ನೆಲೆಯಲ್ಲಿ ಸರ್ಕಾರ ಈಚೆಗೆ ಹೊರಡಿಸಿರುವ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಆದೇಶದಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿನ ಸರ್ಕಾರಿ ಕಚೇರಿಗಳಿಗೆ ಸ್ಥಳೀಯ ವೃಂದಗಳಲ್ಲಿನ ವಿವಿಧ ಹುದ್ದೆಗಳಿಗೆ ನೇಮಕಾತಿ ಹೊಂದುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳವರೆಗೆ ಹೈದರಾಬಾದ್ ಕರ್ನಾಟಕ ಪ್ರದೇಶ ಹೊರತು ಪಡಿಸಿ ಬೇರೆಡೆಗೆ ವರ್ಗಾವಣೆ ಮಾಡಬಾರದೆಂದು ಸೂಚನೆಯನ್ನು ನೀಡಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…