ಹೈದರಾಬಾದ್ ಕರ್ನಾಟಕ

ಸಾಮಾಜಿಕ ಕ್ರಾಂತಿಯ ಹರಿಕಾರ ವಿಶ್ವ ಗುರು ಬಸವಣ್ಣನವರು: ಅಂಬಾರಾಯ ಅಷ್ಠಗಿ

ಕಲಬುರಗಿ: ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ರೂವಾರಿ ಬಸವಣ್ಣನವರು ಎಂದು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ   ಅಂಬಾರಾಯ ಅಷ್ಠಗಿ ಹೇಳಿದರು.

ಅವರು ಜಗಜ್ಯೋತಿ ಬಸವಣ್ಣನವರ ೮೮೮ ನೇ ಜಯಂತ್ಯೋತ್ಸವದ ಅಂಗವಾಗಿ ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಬಸವೇಶ್ವರರ  ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. 12ನೇ ಶತಮಾನದಲ್ಲೇ ಜಾತಿ ರಹಿತ, ವರ್ಣ ರಹಿತ, ವರ್ಗ ರಹಿತ, ಸರ್ವ ಸಮಾನತೆಯನ್ನು ಸಾರುವ ಸಮಾಜವನ್ನು ಕಟ್ಟಿದ ತತ್ವಜ್ಞಾನಿ ಬಸವಣ್ಣ ನವರು ನಮ್ಮ ನೆಲದ ಮೊದಲ ಸಾಮಾಜಿಕ ನ್ಯಾಯದ ಹರಿಕಾರರು ಮತ್ತು ಸಮಾಜ ಸುಧಾರಕರಾಗಿದ್ದರು.

ವಚನಗಳ ಮೂಲಕ ಅವರು ಸಾಮಾಜಿಕ ಜಾಗೃತಿಯನ್ನು ಮೂಡಿಸಲು  ಪ್ರಾರಂಭಿಸಿದರು. ಲಿಂಗ ತಾರತಮ್ಯ ಅಥವಾ ಜಾತಿ ಪದ್ಧತಿಯನ್ನು ತಿರಸ್ಕರಿಸಿದರು. ಇದರ ಜೊತೆಗೆ ಇಷ್ಟಲಿಂಗವನ್ನು ಪರಿಚಯಿಸಿದ ಅವರು ಬಿಜ್ಜಳ ಸಾಮ್ರಾಜ್ಯದ ಪ್ರಧಾನ ಮಂತ್ರಿಯಾಗಿದ್ದ ಬಸವಣ್ಣನವರು  ಅನುಭವ ಮಂಟಪವನ್ನು ಪ್ರಾರಂಭಿಸಿದರು.

ಅನುಭವ ಮಂಟಪ ಎನ್ನುವ ಅದ್ಭುತ ಪರಿಕಲ್ಪನೆ ನಿಜಕ್ಕೂ ಮಾದರಿಯಾದದ್ದು, ಇದು ಎಲ್ಲಾ ವರ್ಗದವರನ್ನು ಒಂದೆಡೆ ತರುವ ಪ್ರಯತ್ನವಾಗಿತ್ತು. ಆ ಮೂಲಕ ಸಮಾಜದಲ್ಲಿ ಬೇರೂರಿದ್ದ ತಾರತಮ್ಯ, ಅಂಧಶ್ರದ್ಧೆಯನ್ನು ದೂರ ಮಾಡುವ ಯೋಜನೆಯಾಗಿತ್ತು. ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಮೇಲೇರಲು ಸಮಾನ ಅವಕಾಶವನ್ನು ನೀಡಿದ ಬಸವಣ್ಣನವರ ತತ್ವಾದರ್ಶಗಳು ಇಂದಿಗೂ ಮಾದರಿ ಎಂದು ಅಂಬಾರಾಯ ಅಷ್ಠಗಿ ಅಭಿಪ್ರಾಯಪಟ್ಟರು .

ಈ ಸಂದರ್ಭದಲ್ಲಿ ಎಸ್ ಸಿ ಮೋರ್ಚಾ ನಗರ ಜಿಲ್ಲಾಧ್ಯಕ್ಷ ದೇವೇಂದ್ರ ಸಿನ್ನುರ್ ಹಾಗೂ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಶಿವ ಅಷ್ಠಗಿ ಇದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

2 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

2 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

2 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

2 hours ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

2 hours ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

3 hours ago