ಕಲಬುರಗಿ: ಶಹಬಾದ್ ಸಮಿಪದ ರಾಷ್ಟೀಯ ಹೆದ್ದಾರೆಗೆ ಹೊಂದಿಕೊಂಡಿರುವ ಶಂಕರವಾಡಿ ಗ್ರಾಮದ ಕಾಗಿಣಾ ಸೇತುವೆಯ ಬಳಿಯ ರಘುಜಿ ಕಾರ್ಖಾನೆಯ ಮುಂಭಾಗದಲ್ಲಿ ಆಕಸ್ಮಿಕ ಆ್ಯಂಬುಲೆನ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆಸಿದೆ.
ಚಿತ್ತಾಪುರ ಸರಕಾರಿ ಆಸ್ಪತ್ರೆಯ 108 ಆ್ಯಂಬುಲೆನ್ಸ್ ಖಾಲಿ ಜಂಬೋ ಆಕ್ಸಿಜನ್ ಸಿಲೆಂಡರ್ ಹೊತ್ತು ಕಲಬುರಗಿ ನಗರಕ್ಕೆ ಹೊರಟಿತ್ತು. ಮಾರ್ಗ ಮದ್ಯೆ ಆ್ಯಂಬುಲೆನ್ಸ್ ಇಂಜಿನಲ್ಲಿ ಆಕಾಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ವಾಹನದಲ್ಲಿ ಮೂವರು ಸಿಬ್ಬಂದಿ ಹಾಗೂ ಚಾಲಕ ವಾಹನದಿಂದ ಕೆಳಗೆ ಇಳಿದ್ದು ಪ್ರಾಣ ರಕ್ಷಿಸಿಕೊಂಡಿದ್ದಾರೆ.
ಪಿಎಸ್ಐ ತೀರುಮಲ್ಲೇಶ್ ಎಎಸ್ಐಗಳಾದ ವೆಂಕಟೇಶ, ಅಶೋಕ ಕಟ್ಟಿ ಹಾಗೂ ಪೊಲೀಸ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರು. ಬೆಂಕಿ ತೀವ್ರತೆ ಕಂಡು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ತಕ್ಷಣವೇ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆ್ಯಂಬುಲೆನ್ಸ್ ಮುಂಬಾಗ ಸಂಪೂರ್ಣ ಸುಟ್ಟು ಹೋಗಿದ್ದು. ಯಾವುದೇ ರೀತಿ ಜೀವ ಹಾನಿ ಉಂಟಾಗಿಲ್ಲ.
ಈ ಕುರಿತು ಶಹಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…