ಕಲಬುರಗಿ: ಕೋವಿಡ್ ಸಮಯದಲ್ಲಿ ಸರಕಾರ ಎಲ್ಲಾ ರೀತಿಯ ಕೆಲಸ ಮಾಡುತ್ತಿದೆ. ಆದರೊಂದಿಗೆ ಶಕ್ತ ಜನರು ತಮ್ಮ ಕೈಲಾದಷ್ಟು ಸಹಾಯ ಮತ್ತು ನೆರವು ಕೋವಿಡ್‌ನಿಂದ ತೊಂದರೆಗೆ ಒಳಗಾದವರಿಗೆ ನೀಡಬೇಕು ಎಂದು ಸಂಸದ ಡಾ. ಉಮೇಶ ಜಾಧವ್ ಹೇಳಿದರು.
ಜಿಮ್ಸ್ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್‌ನಿಂದ ೨೦೦ ಜನರಿಗೆ ಉಪಹಾರ ಮತ್ತು ನೀರಿನ ಬಾಟಲ್ ನೀಡುವ ಕಾರ್ಯಕ್ರಮವನ್ನು ಚಾಲನೆ ನೀಡಿ ಮಾತನಾಡುತ್ತಾ ಅವರು, ಕೋವಿಡ್ ಸಮಯದಲ್ಲಿ ಪ್ರತಿ ಕ್ಷಣವೂ ತುಂಬಾ ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ಉಂಟಾಗಿದೆ. ಕರೋನಾ ಸೊಂಕಿನಿಂದ ನಾವು ಹೆಚ್ಚು ಪರಿಚಿತರಿಂದ ದೂರವಾಗುತ್ತಿದ್ದೇವೆ. ಆದ್ದರಿಂದ ಅದಕ್ಕೆ ಸರಕಾರ, ಅಧಿಕಾರಿಗಳು, ಜಿಲ್ಲಾಡಳಿತವು ಶಕ್ತಿ ಮೀರಿ ಕೆಲಸ ಮಾಡುತ್ತಿದೆ. ಸರಕಾರ ಹಾಗೂ ಅಧಿಕಾರಿಗಳ ಜೊತೆ ಶಕ್ತ ಜನರು ಕೈ ಜೋಡಿಸಿ ಕೋವಿಡ್‌ನ ವಿರುದ್ಧ ಹೋರಾಟ ಹಾಗೂ ಕೋವಿಡ್‌ನ ಜಾಗೃತಿಯನ್ನು ಮೂಡಿಸಬೇಕು ಎಂದರು.
ಪೊಲೀಸರು ಕೈ ಮುಗಿದು ಜನರಿಗೆ ಮಾಸ್ಕ್ ಧರಿಸಲು ತಿಳಿಸುವ ಅಭಿಯಾನ
ಕಲಬುರಗಿ ರೋಟರಿ ಕ್ಲಬ್ ಅಧ್ಯಕ್ಷೆ ಹಾಗೂ ಅಖಿಲ ಭಾರತಿಯ ವಿರಶೈವ ಮಹಾಸಭಾದ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಸುಧಾ ಹಾಲಕಾಯಿ ಅವರು ಮಾತನಾಡುತ್ತಾ, ರೋಟರಿ ಕ್ಲಬ್‌ವು ಒಂದು ಸಣ್ಣ ಸಹಾಯದ ಹಸ್ತ ಚಾಚಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಬಹಳಷ್ಠು ಜನ ಮನೆಗಳಿಂದ ಊಟ, ಉಪಹಾಗ ತರುವುದು ಕಷ್ಠಕರವಾಗಿದೆ. ಬಸವಣ್ಣ ಜಯಂತಿಯಂದು ಈ ಕಾರ್ಯಕ್ಕೆ ಚಾಲನೆ ನೀಡಿದ್ದು ತುಂಬಾನೆ ಖುಷಿ ನೀಡುತ್ತಿದೆ ಎಂದು ಹೇಳಿದರು.
ಐಎಸ್‌ಐ ಆಸ್ಪತ್ರೆ ಹಾಗೂ ಸರಕಾರಿ ಆಸ್ಪತ್ರೆಯಲ್ಲಿ ಇಂದು (ಮೇ-೧೫) ಸುಮಾರು ೨೦೦ ಜನರಿಗೆ ಉಪಹಾರ ಹಾಗೂ ನೀರಿನ ಬಾಟಲ್‌ಗಳನ್ನು ಹಂಚಲಾಯಿತು. ಕೋವಿಡ್ ಮುಗಿಯುವವರೆಗೆ ದಿನಾಲು ೨೦೦ ಜನರಿಗೆ ಉಪಾಹರ ಹಾಗೂ ನೀರಿನ ಬಾಟಲ್‌ಗಳು, ಚಾಪೆ, ಹೊದಿಕೆಗಳನ್ನು ಕೊಡಲಾಗುವುದು ಎಂದು ಡಾ. ಸುಧಾ ಹಾಲಕಾಯಿ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯ ಬಿ.ಜಿ.ಪಾಟೀಲ್, ಶಿವಾರಾಜ್ ಪಾಟೀಲ್ ರದ್ದೇವಾಡಗಿ, ಸಿದ್ದಾಜಿ ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…