ಕಲಬುರಗಿ: ರಂಗಮಾಧ್ಯಮದ ಹವ್ಯಾನಿ ಹಿರಿಯ ಕಲಾವಿದೆ ಶ್ರೀಮತಿ ಶೋಭಾ ರಂಜೋಳಕರ ಅವರು ಇಂದು ನಿಧನಹೊಂದಿದ್ದಾರೆ.
ಕಳೆದ ಕೆಲ ದಿನಗಳಿಂದ ಕೊರೊನಾದಿಂದ ಬಳಲುತ್ತಿದ್ದ ಅವರು ರವಿವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ದಿವಂಗತರಿಗೆ ಸುಮಾರು 70 ವರ್ಷ ವಯಸ್ಸಾಗಿತ್ತು ಅವರು ಸುಮಾರು 4 ದಶಕಗಳಿಂದ ರಂಗಕರ್ಮಿಯಾಗಿ ಸಿನೇಮಾ, ನಾಟಕ, ಧಾರವಾಹಿಗಳಲ್ಲಿ ಅಭಿನಯಿಸುವುದರೊಂದಿಗೆ ಆಕಾಶವಾಣಿ ಮತ್ತು ದೂರದರ್ಶನಗಳಲ್ಲಿಯೂ ಸಹ ಕೆಲಸ ಮಾಡಿದ ಇವರು ಹಲವಾರು ನಾಟಕಗಳನ್ನು ಸಹ ಅವರು ನಿದೇರ್ಶನ ಮಾಡಿದ್ದರು.
ಶ್ರೀ ಸಂಗಮೇಶ್ವರ ಮಹಿಳಾ ಮಂಡಳದ ಮೂಲಕ ಅವರು ಹಲವಾರು ಮಹಿಳೆಯರಿಗಾಗಿ ಕಾರ್ಯಕ್ರಮಗಳನ್ನು ನಡೆಸುವುದರ ಜೊತೆಗೆ ಮಹಿಳೆಯರಲ್ಲಿ ಜಾಗ್ರತಿ ಮೂಡಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಸಹ ಆಯೋಜಿಸಿದ್ದರು. ಚಂದ್ರಶೇಖರ ಕಂಬಾರ ಅವರೊಂದಿಗೆ ಒಂದು ಚಲನಚಿತ್ರದಲ್ಲಿಯೂ ಸಹ ಅಭಿನಿಯಿಸಿದ ರಂಜೋಳಕರ್ ಅವರು ಹಲವಾರು ಕಿರುತೆರೆಯ ಧಾರವಾಹಿಗಳಲ್ಲಿ ಅಭಿನಯಿಸಿದ್ದರು.
ಎಲ್ಲರಿಗೂ ತಾಯಿಯ ಸ್ಥಾನದಲ್ಲಿದ್ದು ಅವ್ವ ಎಂದೇ ಕರೆಯಿಸಿಕೊಳ್ಳುತ್ತಿದ್ದ ಶ್ರೀಮತಿ ಶೋಭಾ ರಂಜೋಳಕರ ಅವರ ಆತ್ಮಕ್ಕೆ ಭಗವಂತ ಚಿರ ಶಾಂತಿಯನ್ನು ನೀಡಲಿ, ಅವರ ಕುಟುಂಬ ಹಾಗೂ ಒಂದೇ ಕುಟುಂಬದಂತಿರುವ ರಂಗಮಾಧ್ಯಮದ ಎಲ್ಲ ಬಾಂಧವರಿಗೂ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಕಸಾಪದ ಮಾಜಿ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ಅವರು ಭಗವಂತನಲ್ಲಿ ಮನಃ ಪೂರ್ವಕವಾಗಿ ಪ್ರಾರ್ಥಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…