ಬಿಸಿ ಬಿಸಿ ಸುದ್ದಿ

ಕೋವಿಡ್ ಕರ್ಫ್ಯೂ ಹಿನ್ನೆಲೆ: ಸಂಚಾರಿ ಹಣ್ಣು, ತರಕಾರಿ ಮಾರಾಟ ವಾಹನಕ್ಕೆ ಚಾಲನೆ

ಕಲಬುರಗಿ: ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆಯಾದ ಜಿಲ್ಲಾ ಹಾಪಕಾಮ್ಸ್ ಸಂಸ್ಥೆಯು ರೈತರಿಂದ ನೇರವಾಗಿ ಹಣ್ಣು ಮತ್ತು ತರಕಾರಿಗಳನ್ನು ಖರೀದಿಸಿ ಮಾರುಕಟ್ಟೆಕ್ಕಿಂತ ಕಡಿಮೆ ಬೆಲೆಯಲ್ಲಿ ಗ್ರಾಹಕರಿಕೆ ಒದಗಿಸಲು ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದಿಂದ (ಐಐಹೆಚ್‌ಆರ್ (IIಊಖ) ಸಂಸ್ಥೆಯಿಂದ) ವಿನ್ಯಾಸಗೊಳಿಸಿದ ಸಂಚಾರಿ ಹಣ್ಣು ಮತ್ತು ತರಕಾರಿ ಮಾರಾಟ ವಾಹನಕ್ಕೆ ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಚಾಲನೆ ನೀಡಲಾಯಿತು.

ಕಲಬುರಗಿ ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕ ಮಂಜುನಾಥ ನಾರಾಯಣಪೂರ, ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕ ಪ್ರಭುರಾಜ್ ಹೆಚ್.ಎಸ್., ಅಧ್ಯಕ್ಷ ಗುರುಶಾಂತ ಪಾಟೀಲ್, ಕಲಬುರಗಿ ಮತ್ತು ಯಾದಗಿರಿ ಕೆ.ಹೆಚ್.ಎಫ್ (ಏಊಈ) ಜಿಲ್ಲಾ ಪ್ರತಿನಿಧಿ ಹಾಗೂ ನಿರ್ದೇಶಕರಾದ ಬಸವರಾಜ ಪಾಟೀಲ ಊಡಗಿ, ಕಲಬುರಗಿ ಜಿಲ್ಲಾ ಹಾಪಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಪರಮೇಶ್ವರ ಶಿಖರೆ ಅವರು ಈ ಸಂಚಾರಿ ಹಣ್ಣು ಮತ್ತು ತರಕಾರಿ ಮಾರಾಟ ವಾಹನಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಸುಭಾ? ಭುವಿ, ಬಸವರಾಜ ಐ.ಕೆ, ಬಾಬುರಾವ ಗೊಬ್ಬೂರ ಹಾಗೂ ಇತರೆ ನಿರ್ದೇಶಕರು ಉಪಸ್ಥಿತರಿದ್ದರು.

ಕಲಬುರಗಿ ಜಿಲ್ಲೆಯ ರೈತರಿಗೆ ಒಳ್ಳೆಯ ಬೆಲೆ ನೀಡಿ ರೈತರಿಂದ ನೇರವಾಗಿ ರೈತರಿಂದ ತಾಜಾ ಹಣ್ಣು ಮತ್ತು ತರಕಾರಿಗಳನ್ನು ಖರೀದಿಸಿ ಈ ಸಂಚಾರಿ ವಾಹನಗಳ ಮೂಲಕ ವಿವಿಧಡೆ ತೆರಳಿ ಹಣ್ಣು ಮತ್ತು ತರಕಾರಿ ಮಾರಾಟ ಮಾಡಲು ಅನುಕೂಲವಾಗುವಂತೆ ಈ ವಿನ್ಯಾಸಗೊಳಿಸಿದ ವಾಹನ ಜೊತೆಗೆ ಇನ್ನೂ ಮೂರು ಸಂಚಾರಿ ಹಣ್ಣು ಮತ್ತು ತರಕಾರಿ ಮಾರಾಟ ವಾಹನಗಳಿಗೆ ಚಾಲನೆ ನೀಡಲಾಯಿತು.

ಈ ಸಂಚಾರಿ ವಾಹನವನ್ನು ಬೆಂಗಳೂರಿನ ಹೆಸರಘಟ್ಟ ಐಐಹೆಚ್‌ಆರ್ (IIಊಖ) ಸಂಸ್ಥೆಯು ವಿನ್ಯಾಸಗೊಳಿಸಿದ್ದು, ಇದರಲ್ಲಿ ಸೋಲಾರ ಪ್ಯಾನಲ್, ದರಪಟ್ಟಿ ಪ್ರದರ್ಶನೆಗಾಗಿ ಐಇಆ, ಒisಣ ಃಟoತಿeಡಿ ವುಳ್ಳ ಹಾಗೂ ಇತರೆ ಸುಸಜ್ಜಿತಹೊಸ ತಂತ್ರಜ್ಞಾನವುದ ವ್ಯವಸ್ಥೆ ಇರುತ್ತದೆ. ಈ ಸಂಚಾರಿ ವಾಹನವನ್ನು ಬೆಂಗಳೂರಿನ (ಕೆ.ಹೆಚ್.ಎಫ್) ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕಾ ಮಾರಾಟ ಮಹಾಮಂಡಳಿ (ನಿ)ಯು ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಹಾಪ್‌ಕಾಮ್ಸ್ ಸಂಘಕ್ಕೆ ನೀಡಿದೆ.

ಕಳೆದ ವ? ಕೋವಿಡ್-೧೯ ಮೊದಲನೇ ಅಲೆಯ ಲಾಕ್ ಡೌನ್ ಸಂದರ್ಭದಲ್ಲಿ ಸಹ ಸಂಚಾರಿ ವಾಹನಗಳ ಮೂಲಕ ವಿವಿಧಡೆ ತೆರಳಿ ಹಣ್ಣು ಮತ್ತು ತರಕಾರಿ ಮಾರಾಟ ಮಾಡಿ ಜನರಿಗೆ ಅನುಕೂಲ ಕಲ್ಪಿಸಲಾಗಿತ್ತು.

ನಗರದ ಸಾರ್ವಜನಿಕರು ಈ ಸಂಚಾರಿ ಹಣ್ಣು ಮತ್ತು ತರಕಾರಿ ಮಾರಾಟ ವಾಹನದಿಂದ ಮಾರುಕಟ್ಟೆಕ್ಕಿಂತ ಕಡಿಮೆ ಬೆಲೆಯಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಖರೀದಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಹಾಪಕಾಮ್ಸ್ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago