ಶಹಾಬಾದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

0
187

ಕಲಬುರಗಿ: ಗಣಿ ಮತ್ತು ಭೂ ವಿಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಸೋಮವಾರ ಶಹಾಬಾದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸ್ಥಳದಲ್ಲಿದ್ದ ಸಾರ್ವಜನಿಕರು ಆಸ್ಪತ್ರೆಯಲ್ಲಿರುವ ವೈದ್ಯ ಸಿಬ್ಬಂದಿ ಸರಿಯಾಗಿ ಸಮಯಕ್ಕೆ ಆಸ್ಪತ್ರೆಗೆ ಬರುವುದಿಲ್ಲ. ವೈದ್ಯರ ಕೊರತೆಯಿದೆ, ಕೋವಿಡ್ ರೋಗಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಸಚಿವರ ಗಮನಕ್ಕೆ ತಂದರು.

Contact Your\'s Advertisement; 9902492681

ತಾಲೂಕಾ ಅರೋಗ್ಯಾಧಿಕಾರಿ ಡಾ.ದೀಪಕ ಪಾಟೀಲ ಮಾತನಾಡಿ ಶಹಾಬಾದ ಪ್ರಸ್ತುತ ಸಮುದಾಯ ಆರೋಗ್ಯ ಕೇಂದ್ರವಿದೆ. ಹೊಸದಾಗಿ ತಾಲೂಕು ಘೋ?ಣೆಯಾಗಿರುವ ಕಾರಣ ತಾಲೂಕು ವ್ಯಾಪ್ತಿಯ ಗ್ರಾಮಸ್ಥರು ಚಿಕಿತ್ಸೆಗೆ ಇಲ್ಲಿಗೆ ಅಗಮಿಸುವುದರಿಂದ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಇದನ್ನು ತಾಲೂಕಾ ಆಸ್ಪತ್ರೆಯಾಗಿ ಮೇಲ್ದರ್ಜೇಗೇರಿಸಬೇಕು ಎಂದರು. ಶಹಾಬಾದ ಸಿ.ಹೆಚ್.ಸಿ ಪ್ರಭಾರಿ ಆಡಳಿತ ವೈದ್ಯಾಧಿಕಾರಿ ಡಾ.ಮೊಹಮ್ಮದ ಅಬ್ದುಲ್ ರಹೀಮ್ ಮಾತನಾಡಿ ೩೦ ಹಾಸಿಗೆಯ ಈ ಅಸ್ಪತ್ರೆಯಲ್ಲಿ ಪ್ರಮುಖವಾಗಿ ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್, ಎನ್.ಸಿ.ಡಿ. ವೈದ್ಯ, ಅನೆಸ್ಥೇಶಿಯಾ ವೈದ್ಯರ ಹುದ್ದೆ ಖಾಲಿಯಿದೆ. ಕೋವಿಡ್ ಪೂರ್ವ ಪ್ರತಿನಿತ್ಯ ಸುಮಾರು ೩೫೦ ಹೊರ ರೋಗಿಗಳನ್ನು ನೋಡಲಾಗುತಿತ್ತು. ಇದೀಗ ಇದರ ಸಂಖ್ಯೆ ೧೫೦ಕ್ಕೆ ಇಳಿದಿದೆ. ಇಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ಅವಕಾಶವಿದ್ದು, ಸಿಲೆಂಡರ್ ಅವಶ್ಯಕತೆವಿದೆ ಎಂದು ಸಚಿವರ ಗಮನಕ್ಕೆ ತಂದರು.

ಸಾರ್ವಜನಿಕರ ಅಹವಾಲು ಆಲಿಸಿ ಮಾತನಾಡಿದ ಸಚಿವರು ಶಹಾಬಾದ ಸಿ.ಹೆಚ್.ಸಿ.ಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರಯಲು ೫ ಸಿಲೆಂಡರ್ ನೀಡಲಾಗುವುದು. ಇಲ್ಲಿ ವೈದ್ಯರ ಕೊರತೆ ಹಿನ್ನೆಲೆಯಲ್ಲಿ ವಾರಕ್ಕೆ ಮೂರು ದಿನದಂತೆ ಕಾರ್ಯನಿರ್ವಹಿಸಲು ಸ್ತ್ರೀರೋಗ ತಜ್ಞರನ್ನು ನಿಯೋಜಿಸಬೇಕು ಎಂದು ಸ್ಥಳದಲ್ಲಿದ್ದ ಡಿ.ಹೆಚ್.ಓ. ಡಾ.ಶರಣಬಸಪ್ಪ ಗಣಜಲಖೇಡ್ ಅವರಿಗೆ ನಿರ್ದೇಶನ ನೀಡಿದ ಅವರು ಇ.ಎಸ್.ಐ.ಸಿ ಆಸ್ಪತ್ರೆಯನ್ನು ಶೀಘ್ರದಲ್ಲಿಯೆ ಕೋವಿಡ್ ಕೇರ್ ಸೆಂಟರ್ ಆಗಿ ಆರಂಭಿಸಲಿದ್ದು, ತದನಂತರ ಇದನ್ನು ಪೂರ್ಣ ಪ್ರಮಾಣದ ಆಸ್ಪತ್ರೆಯಾಗಿ ಕಾರದಯನಿರ್ವಹಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಶಹಾಬಾದ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಅವರು ಆಸ್ಪತ್ರೆಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ, ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿ?ತ್ತಿನ ಶಾಸಕರಾದ ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ, ದೊಡ್ಡಪಗೌಡ ಪಾಟೀಲ ನರಿಬೋಳ, ಮಾಜಿ ಎಂ.ಎಲ್.ಸಿ. ಅಮರನಾಥ ಪಾಟೀಲ, ಜಿಲ್ಲಾ ಪಂಚಾಯತ್ ಸದಸ್ಯ ಶಿವರಾಜ ಪಾಟೀಲ ರದ್ದೆವಾಡಗಿ, ಮಾಜಿ ನಗರಸಭೆ ಅಧ್ಯಕ್ಷ ಗಿರೀಶ ಕಂಬಾನೂರ ,ಸಹಾಯಕ ಆಯುಕ್ತ ರಮೇಶ ಕೋಲಾರ, ಶಹಾಬಾದ ತಹಶೀಲ್ದಾರ ಸುರೇಶ ವರ್ಮಾ, ಸಿ.ಪಿ.ಐ ಯು.ಬಿ.ಚಿಕಮಠ ಮತ್ತಿತರ ಸ್ಥಳೀಯ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here