ಬಿಸಿ ಬಿಸಿ ಸುದ್ದಿ

ಕರೋನಾದಿಂದ ತತ್ತರಿಸಿದ ರೈತರಿಗೆ 50% ರಿಯಾಯಿತಿ ದರದಲ್ಲಿ ರಸಗೊಬ್ಬರ ನೀಡಿ:ಸಿದ್ದುಗೌಡ ಅಫಜಲಪುರಕರ್

ಚಿತ್ತಾಪುರ:ಕರೋನಾ ಮಹಾಮಾರಿ ದೇಶವ್ಯಾಪಿ ಹರಡಿದ್ದು, ನಮ್ಮ ರಾಜ್ಯದಲ್ಲಿ ಕೂಡ ರಣಕೇಕೆ ಹಾಕುತ್ತಿದೆ.ಎಲ್ಲಾ ವರ್ಗದವರಂತೆ ರೈತರು ಸಹ ತತ್ತರಿಸಿ ಹೋಗಿದ್ದಾರೆ ಇಂತಹ ಸಂಕಷ್ಟದ ಸಮಯದಲ್ಲಿ ರೈತರಿಗೆ 50% ರಿಯಾಯಿತಿ ದರದಲ್ಲಿ ರಸಗೊಬ್ಬರ ವಿತರಣೆ ಮಾಡಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸಿದ್ದುಗೌಡ ಅಫಜಲಪುರಕರ್ ಅವರು ಮನವಿ ಮಾಡಿದ್ದಾರೆ.

ಇಂದು ಚಿತ್ತಾಪುರಕ್ಕೆ ಆಗಮಿಸಿದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಮುರುಗೇಶ್ ನಿರಾಣಿ ಅವರಿಗೆ ತಾಲೂಕಿನ ರೈತರ ಸಮಸ್ಯೆಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಿದರು.
ಕ್ಷೇತ್ರದ ಶಾಸಕರಾದ ಪ್ರಿಯಾಂಕ ಖರ್ಗೆ ಅವರು ಹಗಲಿರುಳು ಜನರ ಸೇವೆಯಲ್ಲಿ ತೊಡಗಿದ್ದಾರೆ. ಕರೋನಾ ಮಹಾಮಾರಿ ನಿಯಂತ್ರಣ ಮಾಡಲು ತಾಲೂಕಿನಲ್ಲಿ ಅರಿವು ಮೂಡಿಸುವ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ.

ತಮ್ಮ ವೈಯಕ್ತಿಕ ಖರ್ಚಿನಲ್ಲಿ ಜಿಲ್ಲೆಗೆ ಮಾದರಿಯಾಗುವಂತ ಕೋವಿಡ್ ಸೆಂಟರ್ ಕೂಡ ಪ್ರಾರಂಭ ಮಾಡಿದ್ದಾರೆ. ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ರೈತರಿಗೆ ಬೇಕಾದ ಕೃಷಿಉಪಕರಣಕ್ಕೆ ಸಂಬಂಧಿಸಿದಂತೆ ಪರಿಕರಗಳು ಮತ್ತು ಸರ್ಕಾರದ ಇನ್ನಿತರ ಸೌಲಭ್ಯಗಳನ್ನು ಕೇಳಿದರೆ ಕರೋನಾ ಇರುವುದರಿಂದ ರಾಜ್ಯ ಸರ್ಕಾರವು ರೈತರಿಗೆ ಯಾವುದೇ ತರನಾದ ಅನುದಾನ ಕೊಟ್ಟಿಲ ಎಂದು ಅಧಿಕಾರಿಗಳು ಕಾರಣ ಹೇಳುತ್ತಿದ್ದಾರೆ. ನಮ್ಮ ತಾಲೂಕಿನ ಎಲ್ಲಾ ರೈತರಿಗೆ ಇನ್ನು ಬೆಳೆ ಪರಿಹಾರ ತಲುಪಿಲ್ಲಾ.ಇದೆ ತರಹ ಮುಂದುವರೆದರೆ ರೈತರು ಮತಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ.ರೈತರು ಸಂಕಷ್ಟಕ್ಕೆ ಸಿಲುಕಿದರೆ ನಮ್ಮ ರಾಜ್ಯದ ಆರ್ಥಿಕತೆಯೂ ಕುಂಠಿತವಾಗುತ್ತದೆ.

ಇನ್ನು ಕೆಲವೇ ದಿನಗಳಲ್ಲಿ ಬಿತ್ತನೆಯ ಕಾರ್ಯ ಶುರುವಾಗುವುದರಿಂದ ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಅವರಿಗೆ ಯಾವುದೇ ತೊಂದರೆಯಾಗದಂತೆ ಬಿತ್ತನೆಯ ಬೀಜಗಳು ಮತ್ತು ರೈತೋಪಕರಣಗಳು ಸುಲಭವಾಗಿ ಸಿಗುವಂತೆ ಅನುವು ಮಾಡಿಕೊಡಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದರು.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

5 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

5 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

6 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

16 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

16 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

17 hours ago