ಶಹಾಬಾದ: ಕೋವಿಡ್ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಶಹಾಬಾದ ತಾಲೂಕಿನಾದ್ಯಂತ ವಾರದಲ್ಲಿ ಗುರುವಾರ, ಶುಕ್ರವಾರ & ಶನಿವಾರ ಸಂಪೂರ್ಣ ಲಾಕ್ ಡೌನ್ ಇರಲಿದೆ ಎಂದು ತಹಸೀಲ್ದಾರ ಸುರೇಶ ವರ್ಮಾ ಮಂಗಳವಾರ ತಿಳಿಸಿದ್ದಾರೆ.
ಕೊರೊನಾ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ವಾರದಲ್ಲಿ ಗುರುವಾರ, ಶುಕ್ರವಾರ ಹಾಗೂ ಶನಿವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆÉ. ಅಂದು ಲಿಕ್ಕರ್, ತರಕಾರಿ, ಹೋಟೆಲ್, ಬ್ಯಾಂಕ್,ಹಣ್ಣು, ದಿನಸಿ ಅಂಗಡಿ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ.ಕೇವಲ ಹಾಲು, ಆಸ್ಪತ್ರೆ ಹಾಗೂ ಮೆಡಿಕಲ್‍ಗೆ ಮಾತ್ರ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಅಲ್ಲದೇ ರವಿವಾರ ಎಂದಿನಂತೆ ಲಾಕ್‍ಡೌನ್ ಇದ್ದು, ಸೋಮವಾರ, ಮಂಗಳವಾರ ಹಾಗೂ ಬುಧವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗ ಮಾತ್ರ ಅವಕಾಶ ನೀಡಲಾಗಿದೆ. ಮೂರು ದಿನಗಳ ಬಂದ್ ಸಂದರ್ಭದಲ್ಲಿ ಅನಾವಶ್ಯಕವಾಗಿ ರಸ್ತೆಯ ಮೇಲೆ ಬಂದ ವಾಹನಗಳನ್ನು ಜಪ್ತಿ ಮಾಡುವುದಲ್ಲದೇ ದಂಡ ಹಾಕಲಾಗುವುದು.ವಾಹನಗಳನ್ನು ಲಾಕ್‍ಡೌನ್ ನಂತರವೇ ಬಿಡುಗಡೆ ಮಾಡಲಾಗುವುದು.
ಆದ್ದರಿಂದ ತಾಲೂಕಿನ ಸಾರ್ವಜನಿಕರು ಯಾವುದೇ ಕಾರಣಕ್ಕೂ ಹೊರಗಡೆ ಬರದೇ ಮನೆಯಲ್ಲಿರಿ.ತುರ್ತು ಸಂದರ್ಭದಲ್ಲಿ ಮಾತ್ರ ಆಸ್ಪತ್ರೆಗೆ ಬರಲು ಅವಕಾಶವಿದೆ. ಆದರೆ ಯಾರಾದರೂ ನಿಯಮಗಳನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ತಿಳಿಸಲಾಗಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು. ಈ ಕರೊನಾವನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.